ಸಾಗರದಲ್ಲಿ ಇವತ್ತು ಸಾಹಿತ್ಯ ಹಬ್ಬ, ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ರಕ್ತದಾನ, ಸಾಲು ಸಾಲು ಗೋಷ್ಠಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ : 12ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (Sammelana) ಸಾಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಲೇಖಕ ಅ.ರಾ.ಶ್ರೀನಿವಾಸ್ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಟಿ.ಸ್ವಾಮಿ ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಏನೇನೆಲ್ಲ ಕಾರ್ಯಕ್ರಮವಿದೆ?

ಬೆಳಿಗ್ಗೆ 9ಕ್ಕೆ ಉಪವಿಭಾಗಾಧಿಕಾರಿ ಯತೀಶ್ ಆರ್. ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ನಂತರ ನಗರಸಭೆ ಆವರಣದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಇದೆ ಮೊದಲ ಬಾರಿ ಸಾಹಿತ್ಯ ಸಮ್ಮೇಳನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಬೆಳಿಗ್ಗೆ 10ಕ್ಕೆ ಗಾಂಧಿ ಮೈದಾನದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11.45ಕ್ಕೆ ಮಲೆನಾಡಿನ ಪ್ರಸ್ತುತ ತಲ್ಲಣಗಳು ಕುರಿತು ಕೃಷಿಕ ಸೀತಾರಾಮ್ ಕುರುವರಿ, ಮಲೆನಾಡಿನ ಸಾಹಿತ್ಯದ ಪ್ರಸ್ತುತ ಸ್ಥಿತಿಗತಿ ಕುರಿತು ಕುಂಸಿ ಉಮೇಶ್ ಮಾತನಾಡಲಿದ್ದಾರೆ.

NATIONAL-PUBLIC-SCHOOL-scaled

ಮಧ್ಯಾಹ್ನ 1ಕ್ಕೆ ಸಮ್ಮೇಳನಾಧ್ಯಕ್ಷರ ಸಾಹಿತ್ಯ ಅವಲೋಕನ ಗೋಷ್ಠಿಯಲ್ಲಿ ಚಿಂತಕ ದೇವೇಂದ್ರ ಬೆಳೆಯೂರು ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಹಾ.ಉಮೇಶ್ ಅಧ್ಯಕ್ಷತೆಯಲ್ಲಿ ಕವಿ ಗೋಷ್ಠಿ ಆಯೋಜಿಸಲಾಗಿದೆ. ಸಂಜೆ 4.30ಕ್ಕೆ ಮಹಿಳೆ-ಪ್ರಸ್ತುತ ಸಾಮಾಜಿಕ ಮನೋಭಾವ ಕುರಿತು ರಂಗ ಕಲಾವಿದೆ ವಿದ್ಯಾ ಹೆಗಡೆ ಮಾತನಾಡಲಿದ್ದಾರೆ.

ಸಂಜೆ 5.30ಕ್ಕೆ ವಿವಿಧ ಕ್ಷೇತ್ರಗಳ ಸಾಧಕರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಸನ್ಮಾನಿಸಲಿದ್ದಾರೆ. ಸಂಜೆ 7ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹೆಚ್.ಹಾಲಪ್ಪ ಹರತಾಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ » ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಪ್ರಮೋದ್‌ ಮುತಾಲಿಕ್‌ಗೆ ತಡೆ, ನೊಟೀಸ್‌ ಕೊಟ್ಟು ಗಡಿ ದಾಟಿಸಿದ ಪೊಲೀಸ್‌, ಯಾಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment