ವಾರಾಹಿಗೆ ಭದ್ರಾ ಕಾಡಾ ಅಧ್ಯಕ್ಷರ ಭೇಟಿ, ರೈತರು, ಅಧಿಕಾರಿಗಳ ಜೊತೆ ಮಹತ್ವದ ಸಭೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಭದ್ರಾ ಕಾಡಾ ವ್ಯಾಪ್ತಿಯ ವಾರಾಹಿ ಯೋಜನೆ (Project) ಅಣೆಕಟ್ಟು ಹಾಗೂ ಅಚ್ಚುಕಟ್ಟು ಭಾಗದ ಸ್ಥಳವನ್ನು ಪರಿವೀಕ್ಷಿಸಿ, ರೈತರೊಂದಿಗೆ ಯೋಜನೆಯ ಕಾರ್ಯರೂಪದ ಕುರಿತು ಚರ್ಚಿಸಿದರು.

ನಂತರ ಭದ್ರಾಕಾಡಾ ಸಿದ್ದಾಪುರ ಕಚೇರಿಯಲ್ಲಿ ಕಾಡಾ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ಸಭೆ ನಡೆಸಿದರು. ಹೆಚ್ಚು ನೀರು ನಾಲೆಗಳಲ್ಲಿ ವ್ಯರ್ಥವಾಗಲು ಅವಕಾಶ ನೀಡದೆ ರೈತರ ಬೆಳೆಗಳಿಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ಸಕಾಲಕ್ಕೆ ನೀರು ಒದಗಿಸುವ ಪ್ರಯತ್ನ ಮಾಡುವ ಅನಿವಾರ್ಯತೆ ಇದೆ. ರೈತರಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

Dr-amshumanth-visit-varahi-project-area.

ರೈತರ ಅಹವಾಲು ಆಲಿಸಿ ಸೂಕ್ತ ಪರಿಹಾರಕ್ಕಾಗಿ, ಇಲಾಖೆ ಸಚಿವರು ಹಾಗೂ ಸರ್ಕಾರದ ಗಮನಕ್ಕೆ ತಂದು ಅಚ್ಚುಕಟ್ಟು ಭಾಗದ ರೈತರ ಹಿತ ಕಾಪಾಡುವ ಭರವಸೆ ನೀಡಿದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಭದ್ರಾ ಕಾಡಾ ಆಡಳಿತಾಧಿಕಾರಿ, ಭೂ ಅಭಿವೃದ್ಧಿ ತಾಂತ್ರಿಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಯೋಜನೆಗೆ ಸಂಬಂಧಿಸಿದ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.

NATIONAL-PUBLIC-SCHOOL-scaled

ಇದನ್ನೂ ಓದಿ » ಭದ್ರಾವತಿ ಅಧಿಕಾರಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment