ಸಿಗಂದೂರು ಲಾಂಚ್‌, ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ : ಸಿಗಂದೂರು ಲಾಂಚ್‌ಗೆ (Launch) ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ.

ಗಲಾಟೆ ಆಗಿದ್ದೇಕೆ?

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ, ತಾಯಿ ಪ್ರಭಾ, ಸಹೋದರ ಪವನ್‌ಕುಮಾರ್ ಮತ್ತು ಮಾವನ ಮಗ ವಿನಾಯಕ್ ಪ್ರಸಾದ್ ಎಂಬುವರು ಸಂಬಂಧಿಕರ ಮದುವೆಗೆಂದು ಸಾಗರಕ್ಕೆ ಬಂದಿದ್ದರು. ಅಲ್ಲಿಂದ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯಕ್ಕೆ ಓಮ್ನಿ ಕಾರಿನಲ್ಲಿ ಹೊರಟಿದ್ದರು. ವಾಹನಗಳನ್ನು ಸರದಿಯಲ್ಲಿ ಲಾಂಚ್‌ಗೆ ಬಿಡುವ ವಿಚಾರದಲ್ಲಿ ಟಿಕೆಟ್ ಕಲೆಕ್ಟರ್ ಮತ್ತು ಕಾರಿನಲ್ಲಿದ್ದ ವಿನಯ್‌ ಪ್ರಸಾದ್‌ ಮಧ್ಯೆ ವಾಗ್ವಾದ ನಡೆದಿತ್ತು. ಬಳಿಕ ದೇವಸ್ಥಾನಕ್ಕೆ ತೆರಳಲು ಕುಟುಂಬದವರು ಲಾಂಚ್‌ಗೆ ಓಮ್ನಿ ಕಾರು ಹಾಕಿದ್ದರು.

Sigandur-Launch-in-Sharavathi-River

ಗುಂಪು ಕಟ್ಟಿಕೊಂಡು ಬಂದು ಹಲ್ಲೆ

ಬಳಿಕ ಗುಂಪು ಕಟ್ಟಿಕೊಂಡು ಬಂದ ಟಿಕೆಟ್‌ ಕಲೆಕ್ಟರ್‌, ಓಮ್ನಿಯಲ್ಲಿದ್ದ ವಿನಾಯಕ, ಪವನ್‌ಕುಮಾರ್‌ ಮೇಲೆ ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಓಮ್ನಿಗೆ ಹಾನಿ ಮಾಡಿದ್ದಾರೆ. ಮಹಿಳೆಯರು ಎಂಬುದನ್ನು ಲೆಕ್ಕಿಸದೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ದೂರಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಸಾಗರದ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಘಟನೆ ಸಂಬಂಧ ಕಾರ್ಗಲ್‌ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

NATIONAL-PUBLIC-SCHOOL-scaled

ಇದನ್ನೂ ಓದಿ » ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ, ಶೋಧ ಕಾರ್ಯಾಚರಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 6, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment