ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ಜೆಡಿಎಸ್‌ ಗರಂ, ಬೀದಿಗಿಳಿದು ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ರಾಜ್ಯ ಸರ್ಕಾರ ವೈಫಲ್ಯ ಖಂಡಿಸಿ ಜೆಡಿಎಸ್‌ ಜಿಲ್ಲಾ ಘಟಕದ ವತಿಯಿಂದ ಇವತ್ತು ಪ್ರತಿಭಟನೆ (Protest) ನಡೆಸಲಾಯಿತು. ಜೆಡಿಎಸ್‌ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಜೆಡಿಎಸ್‌ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಿಲ್ಲ, ಅನ್ನ ಭಾಗ್ಯ ಯೋಜನೆ ಅಕ್ಕಿಯೂ ಕೊಟ್ಟಿಲ್ಲ, ಹಣವನ್ನೂ ನೀಡಿಲ್ಲ. ಗುತ್ತಿಗೆದಾರರ 32 ಸಾವಿರ ಕೋಟಿ ರೂ. ಬಿಲ್‌ ಬಾಕಿ ಸೇರಿದಂತೆ ರಾಜ್ಯ ಸರ್ಕಾರ ನಡೆ ಖಂಡಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯಾರೆಲ್ಲ ಏನೆಲ್ಲ ಹೇಳಿದರು?

ಸರ್ಕಾರದ ಬಳಿ ಹಣವಿಲ್ಲ. ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ. ಎಲ್ಲಾ ಭಾಗ್ಯಗಳು ಜನರಿಂದ ದೂರಾಗಿದ್ದು, ಅತ್ಮಹತ್ಯೆ ಭಾಗ್ಯ ನೀಡಿದೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಇ – ಸ್ವತ್ತು ಸರಳೀಕರಣಗೊಳಿಸಿಲ್ಲ. ದುರಾಡಳಿತದಿಂದ ಜನರು ತತ್ತರಿಸಿದ್ದಾರೆ.

– ಕೆ.ಬಿ.ಪ್ರಸನ್ನಕುಮಾರ್‌, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ

jds-protest-in-Shimoga-against-state-government
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನೆಟ್ಟು, ಬೋಲ್ಟು ಕುರಿತು ಉಪ ಮುಖ್ಯಮಂತ್ರಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ಸರ್ಕಾರದ ನೆಟ್ಟು, ಬೋಲ್ಟುಗಳನ್ನೇ ಟೈಟ್‌ ಮಾಡಬೇಕಾಗಿದೆ. ಸರ್ಕಾರದಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ ಇದೆ. ಇವುಗಳನ್ನು ಭರ್ತಿ ಮಾಡಿಕೊಳ್ಳದೆ ಸರ್ಕಾರ ವಿಫಲವಾಗಿದೆ. ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಿಲ್ಲ. ಇದೇ ರೀತಿ ಹಲವು ವೈಫಲ್ಯಗಳಿವೆ.

– ಕಡಿದಾಳ್‌ ಗೋಪಾಲ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ

ಪ್ರತಿಭಟನೆಯಲ್ಲಿ ಪ್ರಮುಖರಾದ ದೀಪಕ್‌ ಸಿಂಗ್‌, ತ್ಯಾಗರಾಜ್‌, ಮಧು ಕುಮಾರ್‌, ಗಂಧದಮನೆ ನರಸಿಂಹ, ದಾದಾಪೀರ್‌, ಅಬ್ದುಲ್‌ ವಾಜಿದ್‌, ಶ್ಯಾಮ್‌, ಮಾಧವಮೂರ್ತಿ, ನಿಖಿಲ್‌, ಬಾಬು, ಸಿದ್ದೇಶ್‌, ಚಟ್ನಳ್ಳಿ ಸುರೇಶ್‌ ಸೇರಿದಂತೆ ಹಲವರು ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸಾಗರ ನಗರಸಭೆಯಲ್ಲಿ ಗದ್ದಲ, ಶಿವಮೊಗ್ಗದಲ್ಲಿ ಡಿಸಿಗೆ ದೂರು ಕೊಟ್ಟ ಕಾಂಗ್ರೆಸ್‌ ನಿಯೋಗ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 6, 2025

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment