ಶಿವಮೊಗ್ಗ : ಎಲೆ ಚುಕ್ಕೆ ರೋಗದಿಂದ ಲಕ್ಷಾಂತರ ಅಡಿಕೆ ಬೆಳೆಗಾರರು (ADIKE) ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆ ಸಸ್ಯ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನಲ್ಲಿ ಎಲೆ ಚುಕ್ಕೆ ರೋಗದ ಕುರಿತು ಪ್ರಸ್ತಾಪಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತಲು ಹೆಚ್ಚು ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ರೋಗ ನಿಯಂತ್ರಿಸಿ ಸಸ್ಯ ಸಂರಕ್ಷಣೆಗೆ 62 ಕೋಟಿ ರೂ. ಒದಗಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ತೋಟಗಾರಿಕೆ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ 52 ಸಾವಿರ ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯಧನ ಒದಗಿಸಲಾಗುತ್ತದೆ.

ಇದನ್ನೂ ಓದಿ » ಸಾಗರ ನಗರಸಭೆಯಲ್ಲಿ ಗದ್ದಲ, ಶಿವಮೊಗ್ಗದಲ್ಲಿ ಡಿಸಿಗೆ ದೂರು ಕೊಟ್ಟ ಕಾಂಗ್ರೆಸ್ ನಿಯೋಗ, ಕಾರಣವೇನು?
