ಶಿವಮೊಗ್ಗ ಲೈವ್
ಶಿವಮೊಗ್ಗ : ಅಪ್ರಾಪ್ತನ ಕೈಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ಶಿವಮೊಗ್ಗ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿ ಆದೇಶಿಸಿದೆ.
ಫೆ.24ರಂದು ಮೀನಾಕ್ಷಿ ಭವನ ಹೊಟೇಲ್ ಸಮೀಪ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ತಪಾಸಣೆ ನಡೆಸುತ್ತಿದ್ದರು. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕನನ್ನು ತಡೆದು ಪರಿಶೀಲಿಸಿದಾಗ ಆತ ಅಪ್ರಾಪ್ತ ಎಂಬುದು ತಿಳಿದು ಬಂದಿತ್ತು. ಈ ಹಿನ್ನೆಲೆ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?

ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ತನಿಖೆ ನಡೆಸಿದ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮೊಪೆಡ್ ಮಾಲೀಕ ಬಾಪೂಜಿನಗರ ನಿವಾಸಿಗೆ ದಂಡ ವಿಧಿಸಿ ಆದೇಶಿಸಿದೆ.

ಇದನ್ನೂ ಓದಿ » ಕೋಣಂದೂರು ಸಮೀಪ ಕಾರುಗಳ ಸರಣಿ ಅಪಘಾತ, ಹರಿಹರಪುರ ಮಠದ ಶ್ರೀಗಳು ಪಾರು