ರಾಜ್ಯ ಬಜೆಟ್‌, ಶಿವಮೊಗ್ಗಕ್ಕೆ ಸಿಕ್ಕಿದ್ದೇನು? ಪಟ್ಟಿ ಪ್ರಕಟಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ರಾಜ್ಯ ಸರ್ಕಾರದ ಬಜೆಟ್‌ನಲ್ಲಿ (Budget) ಶಿವಮೊಗ್ಗ ಜಿಲ್ಲೆಗೆ ಯಾವುದೇ ಯೋಜನೆ ಘೋಷಣೆಯಾಗಿಲ್ಲ ಎಂದು ಬಿಜೆಪಿ ಆರೋಪಿಸಿದೆ. ಆದರೆ ಬಜೆಟ್‌ ಹೊರತಾಗಿಯು ಜಿಲ್ಲೆಯಲ್ಲಿ ಹಲವು ಯೋಜನೆಗಳು ಜಾರಿಗೆ ಬರಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚಂದ್ರಗುತ್ತಿ‌ ಅಭಿವೃದ್ಧಿ ಪ್ರಾಧಿಕಾರದ ಹೊರತಾಗಿಯು ಬಜೆಟ್‌ನಲ್ಲಿ (Budget) ಜಿಲ್ಲೆಗೆ ಹಲವು ಯೋಜನೆಗಳ ಲಾಭ ದೊರೆಯಲಿದೆ. ಇನ್ನೊಂದೆಡೆ ಬಜೆಟ್‌ನಲ್ಲಿ ಘೋಷಣೆ ಆಗದಿದ್ದರು ಹಲವು ಯೋಜನೆಗಳನ್ನು ಜಿಲ್ಲೆಯಲ್ಲಿ ಜಾರಿಗೊಳಿಸುವ ಅವಕಾಶವಿದೆ. ಆ ಕೆಲಸಗಳು ನಡೆಯಲಿವೆ ಎಂದು ತಿಳಿಸಿದರು.

ಮಿನಿಸ್ಟರ್‌ ಏನೆಲ್ಲ ಹೇಳಿದರು?

[su_note note_color=”#f1f1f1″ text_color=”#000000″ radius=”0″]

ಜಿಲ್ಲಾಡಳಿತ ಭವನಕ್ಕೆ ಸದ್ಯದಲ್ಲೇ ಟೆಂಡರ್

[su_divider top=”no” divider_color=”#f1f1f1″ link_color=”#ffffff” size=”1″ margin=”10″]

ಜಿಲ್ಲಾಡಳಿತ ಭವನ ಕಟ್ಟಡವು ಬಜೆಟ್‌ನಲ್ಲಿ ಘೋಷಣೆಯಾಗಿಲ್ಲ. ಆದರೆ ಇಲಾಖವಾರು ಅನುದಾನ ಪಡೆದು ಭವನ ನಿರ್ಮಿಸಲಾಗುತ್ತದೆ. ಜಿಲ್ಲಾಡಳಿತ ಭವನ ಕಟ್ಟಡದಲ್ಲಿ ಕಂದಾಯ ವಿಭಾಗ, ಜಿಲ್ಲಾ ರಕ್ಷಣಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ ಕಚೇರಿ ಕೂಡ ಇರಲಿವೆ. ಆದ್ದರಿಂದ ಕಂದಾಯ ಇಲಾಖೆಯಿಂದ 50 ಕೋಟಿ ರೂ., ಗೃಹ ಇಲಾಖೆಯಿಂದ 25 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅನುದಾನ ಪಡೆಯಲಾಗುತ್ತದೆ ಎಂದರು.

Minister-Madhu-Bangarappa-Press-meet-about-budget
ಶಿವಮೊಗ್ಗ ಪತ್ರಿಕಾ ಭವನದಲ್ಲಿ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿದರು.

[su_divider top=”no” divider_color=”#f1f1f1″ link_color=”#ffffff” size=”1″ margin=”10″]

ಜಿಲ್ಲಾಡಳಿತ ಭವನಕ್ಕೆ ಜಾಗವಿದೆ, ನೀಲನಕ್ಷೆಯು ಸಿದ್ಧವಾಗಿದೆ. ಬಜೆಟ್‌ನಲ್ಲಿ ಭವನಕ್ಕೆ ಅನುದಾನ ಕೊಡುವ ಬದಲು ಇಲಾಖಾವಾರು ಹಣ ಬಿಡುಗಡೆ ಮಾಡಿಸಿ, ಟೆಂಡರ್‌ ಕರೆಯಲು ಸೂಚಿಸಲಾಗಿದೆ. 200 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ಯೋಜಿಸಲಾಗಿದ್ದು, ಎರಡೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು. ‌[/su_note]

ಕ್ಯಾನ್ಸರ್‌ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೇ

ಮೆಗ್ಗಾನ್‌ ಆಸ್ಪತ್ರೆಯನ್ನು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಸಿಮ್ಸ್‌) ವಹಿಸಲಾಗಿದೆ. ಆಸ್ಪತ್ರೆಯಲ್ಲಿ ವ್ಯವಸ್ಥೆ ಸುಧಾರಣೆ ಆಗಬೇಕಿದೆ. ಇನ್ನು, ಜಾಗದ ಸಮಸ್ಯೆಯಿಂದಾಗಿ ಕ್ಯಾನ್ಸರ್‌ ಆಸ್ಪತ್ರೆ ನಿರ್ಮಾಣ ಕಾಮಗಾರಿ ತಡವಾಗುತ್ತಿದೆ. ಶೀಘ್ರ ಸಮಸ್ಯೆ ಪರಿಹರಿಸಿ ಸರ್ಕಾರಿ ಕ್ಯಾನ್ಸರ್‌ ಆಸ್ಪತ್ರೆ ಆರಂಭಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

minister Madhu bangarappa press meet in Shimoga Press trust.

[su_note note_color=”#f1f1f1″ text_color=”#000000″ radius=”0″]

ಶರಾವತಿ ನದಿ ನೀರು ಪೂರೈಕೆ

[su_divider top=”no” divider_color=”#f1f1f1″ link_color=”#ffffff” size=”1″ margin=”10″]

ಕರ್ನಾಟಕ ನೀರಾವರಿ ನಿಗಮದಡಿ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದೆ. ಸೊರಬ, ಶಿರಾಳಕೊಪ್ಪ ಮತ್ತು ಆನವಟ್ಟಿ ಪಟ್ಟಣ ಹೊರತು ಉಳಿದೆಡೆಗೆ ಶರಾವತಿ ನದಿ ನೀರು ಪೂರೈಕೆ ಮಾಡುವ ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಲಭಿಸಿಲ್ಲ. ಅದು ದೊರತಿದ್ದರೆ ಈ ಯೋಜನೆ ಕೂಡ ಬಜೆಟ್‌ನಲ್ಲಿ ಘೋಷಣೆ ಆಗುತ್ತಿತ್ತು. ಮಾ.11ರಂದು ದಹೆಲಿಯಲ್ಲಿ ಸಭೆ ನಡೆಯಲ್ಲಿದ್ದು ಅಲ್ಲಿ ಯೋಜನೆಗೆ ಅನುಮತಿ ದೊರೆಯುವ ಸಾಧ್ಯತೆ ಇದೆ. ಇದಕ್ಕೆ ಬಜೆಟ್‌ನ ಹೊರತಾಗಿ ಅನುದಾನ ನೀಡಬಹುದಾಗಿದೆ.

minister Madhu bangarappa press meet in Shimoga Press trust.

[su_divider top=”no” divider_color=”#f1f1f1″ link_color=”#ffffff” size=”1″ margin=”10″]

ಇನ್ನು, ಸೊರಬ, ಆನವಟ್ಟಿ ಮತ್ತು ಶಿರಾಳಕೊಪ್ಪ ಪಟ್ಟಣಗಳಿಗೆ ಪೈಪ್‌ಲೈನ್‌ ಅಳವಡಿ ಕಾರ್ಯ ಮುಗಿದ ಮೇಲೆ ಶರಾವತಿ ನದಿಯಿಂದ ನೀರು ಪೂರೈಕೆ ಮಾಡಲಾಗುತ್ತದೆ. ಈ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹೊರ ವಲಯಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.[/su_note]

ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ 62 ಕೋಟಿ ರೂ., ಕೆಎಫ್‌ಡಿ ನಿಯಂತ್ರಣ 50 ಕೋಟಿ ರೂ., ಮಲೆನಾಡು ಭಾಗದಲ್ಲಿ ಭೂಕುಸಿತ ತಡೆಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ಇದರಿಂದ ಜಿಲ್ಲೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ವಿಜಯ್‌ ಕುಮಾರ್‌, ಕಲಗೋಡು ರತ್ನಾಕರ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಹರ್ಷಿತ್‌ ಗೌಡ, ಜಿ.ಡಿ.ಮಂಜುನಾತ್‌, ಶಿ.ಜು.ಪಾಷಾ, ಕುಮರೇಶ್‌, ವಿನಯ್‌ ತಾಂಡ್ಲೆ ಸೇರಿ ಹಲವರು ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್‌ ಸವಾರ, ಪೋಷಕರಿಗೆ ಬಿಸಿ ಮುಟ್ಟಿಸಿತು ನ್ಯಾಯಾಲಯ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2025

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment