ಚಂದ್ರಗುತ್ತಿಯಲ್ಲಿ ವೈಭವದ ಬ್ರಹ್ಮರಥೋತ್ಸವ, ಲಕ್ಷ ಲಕ್ಷ ಭಕ್ತರು ಭಾಗಿ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ನಡೆಯಿತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ : ಇತಿಹಾಸ ಪ್ರಸಿದ್ಧ ಚಂದ್ರಗುತ್ತಿಯ ರೇಣುಕಾಂಬಾ ದೇವಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ (Ratotsava) ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಭಕ್ತರು ಪಾಲ್ಗೊಂಡು ದೇವಿಯ ಕೃಪೆ ಬೇಡಿದರು.

ಉಪವಿಭಾಗಾಧಿಕಾರಿ ಆರ್.ಯತೀಶ್, ವಿವಿಧ ಧಾರ್ಮಿಕ ವಿಧಿ–ವಿಧಾನಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ಶ್ರೀದೇವಿಯ ನಾಮ ಸ್ಮರಣೆಯೊಂದಿಗೆ ರಥ ಎಳೆದರು. ರಥಕ್ಕೆ ಕಾಳುಮೆಣಸು, ಉತ್ತುತ್ತಿ, ಬಾಳೆ ಹಣ್ಣು ತೂರುವ ಮೂಲಕ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಬೆಳಗ್ಗೆಯಿಂದಲೆ ಧಾರ್ಮಿಕ ಕಾರ್ಯಕ್ರಮ

chandragutti-temple-bhramaratotsava
ಸೊರಬ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿಯ ರೇಣಕಾಂಬಾ ದೇವಿ ದೇವಾಲಯದಲ್ಲಿ ಬ್ರಹ್ಮ ರಥೋತ್ಸವ ಜರುಗಿತು.

ರಥೋತ್ಸವದ (Ratotsava) ಅಂಗವಾಗಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರೇಣುಕಾಂಬೆಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಹರಕೆ ಹೊತ್ತವರು ದೀಡ್ ನಮಸ್ಕಾರ ಹಾಕಿದರು. ಪಡ್ಲಿಗೆ ತುಂಬಿಸುವುದು, ಚೌಳ, ಮಕ್ಕಳಿಗೆ ಕಿವಿ ಚುಚ್ಚಿಸುವ ಕಾರ್ಯಕ್ರಮಗಳು ನಡೆದವು. ಕೆಳದಿಯ ರಾಮ್ ಭಟ್ ಹಾಗೂ ದೇವಾಲಯದ ಪ್ರಧಾನ ಅರ್ಚಕ ಅರವಿಂದ ಭಟ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು.

ಇದನ್ನೂ ಓದಿ » ಪ್ರತಿದಿನ 7 ರಿಂದ 8 ಸಾವಿರ ರೂ. ಲಾಭ, ಮನೆಯಲ್ಲೆ ಕುಳಿತು ಗಳಿಸಬಹುದು ಹಣ, ಮುಂದೇನಾಯ್ತು?

ರೈತರು ತಾವು ಬೆಳೆದ ಅಡಿಕೆ, ಬಾಳೆ ಫಸಲನ್ನು ರಥಕ್ಕೆ ಸಮರ್ಪಿಸಿದರು. ಭಕ್ತರು ಹೂವಿನ ಹಾರಗಳನ್ನು ಮೆರವಣಿಗೆ ಮೂಲಕ ತಂದು ರಥಕ್ಕೆ ಅರ್ಪಿಸುವುದು ವಿಶೇಷವಾಗಿತ್ತು.

ರಾಜ್ಯದ ವಿವಿಧೆಡೆಯ ಭಕ್ತರು

ದೇವಿಯ ಮಹಾ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಹಾವೇರಿ, ದಾವಣಗೆರೆ, ಬಳ್ಳಾರಿ, ಹುಬ್ಬಳ್ಳಿ, ಶಿವಮೊಗ್ಗ, ಬ್ಯಾಡಗಿ, ರಾಣೆಬೆನ್ನೂರು, ರಾಯಚೂರು, ಚಿತ್ರದುರ್ಗ ಸೇರಿದಂತೆ ಉತ್ತರ ಕರ್ನಾಟಕ ಮತ್ತು ವಿವಿಧ ಜಿಲ್ಲೆಗಳ ಭಕ್ತರು ಪಾಲ್ಗೊಂಡಿದ್ದರು.

Minister Madhu Bangarappa in Chandragutti jathre
ರಥೋತ್ಸವದಲ್ಲಿ‌ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ದೇವಿಗೆ ಉಡಿ ಅರ್ಪಿಸಿದರು.

ಇದನ್ನೂ ಓದಿ » ಗೋಧಿಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಶಿವಮೊಗ್ಗದ ಉದ್ಯಮಿ, ಆಗಿದ್ದೇನು?

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ತಹಶೀಲ್ದಾರ್ ಮಂಜುಳಾ ಹೆಗಡಾಳ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಿ.ಕೆ.ಪ್ರಮೀಳಾ ಕುಮಾರಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್. ಗಣಪತಿ ಹುಲ್ತಿಕೊಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ, ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್ ಸೇರಿ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ » ರಾಜ್ಯ ಬಜೆಟ್‌, ಶಿವಮೊಗ್ಗಕ್ಕೆ ಸಿಕ್ಕಿದ್ದೇನು? ಪಟ್ಟಿ ಪ್ರಕಟಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 9, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment