ಶಿವಮೊಗ್ಗ ಲೈವ್
ಶಿವಮೊಗ್ಗ : ಮರಕ್ಕೆ ಬೈಕ್ (Bike) ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. (ಈ ಸುದ್ದಿಯನ್ನು ಇನ್ನು 33 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್ (Bike) ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


ಇದನ್ನೂ ಓದಿ » ಚಂದ್ರಗುತ್ತಿಯಲ್ಲಿ ವೈಭವದ ಬ್ರಹ್ಮರಥೋತ್ಸವ, ಲಕ್ಷ ಲಕ್ಷ ಭಕ್ತರು ಭಾಗಿ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ನಡೆಯಿತು?
