ಭೂಮಿಗಾಗಿ ಬೀದಿಗಿಳಿದ ಆನಂದಪುರದ ರೈತರು, ಅರಣ್ಯಾಧಿಕಾರಿ ಕಚೇರಿ ಮುಂಭಾಗ ಆಕ್ರೋಶ, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ : ಏಳು ಗ್ರಾಮಗಳ (Villages) ವ್ಯಾಪ್ತಿಯನ್ನು ಮೀಸಲು ಅರಣ್ಯ ಪ್ರಸ್ತಾವನೆಯಿಂದ ಕೈ ಬಿಡುವಂತೆ ಆಗ್ರಹಿಸಿ ಆನಂದಪುರ ಹೋಬಳಿ ರೈತ ಸಂಘಟನೆಗಳ ನೇತೃತ್ವದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ‌

ಆನಂದಪುರ ಹೋಬಳಿಯಲ್ಲಿ ದಶಕಗಳಿಂದ ವಾಸವಾಗಿರುವ 650ಕ್ಕೂ ಹೆಚ್ಚು ಕುಟುಂಬಗಳಿಗೆ ನೊಟೀಸ್‌ ನೀಡಲಾಗಿದೆ. ಈ ಹಿಂದೆ ರೈತರಿಗೆ ಹಕ್ಕುಪತ್ರ ನೀಡಲಾಗಿತ್ತು. ಆದರೆ ಈಗ ಈ ಜಾಗವನ್ನು ಅರಣ್ಯ ಪ್ರದೇಶ ಎಂದು ಹೇಳಲಾಗುತ್ತಿದೆ ಎಂದು ರೈತರು ಆರೋಪಿಸಿದರು.

ಯಾರೆಲ್ಲ ಏನೆಲ್ಲ ಹೇಳಿದರು?

ಕಾಗೋಡು ತಿಮ್ಮಪ್ಪ ಅವರು ಸಚಿವರಾಗಿದ್ದಾಗ ಆನಂದಪುರ ಹೋಬಳಿಯ ಹೊಸೂರು, ಮುಂಬಾಳು, ತಾವರೆಹಳ್ಳಿ, ಹೆಬ್ಬೋಡಿ, ಯಡೇಹಳ್ಳಿ, ಹೊಸಗುಂದ ಸೇರಿದಂತೆ ವಿವಿಧೆಡೆ ರೈತರಿಗೆ ಹಕ್ಕುಪತ್ರ ನೀಡಲಾಗಿತ್ತು. ರೈತರ ಸ್ವಧೀನದಲ್ಲಿರುವ ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಅರಣ್ಯ ಇಲಾಖೆ ನೊಟೀಸ್‌ ನೀಡಿದೆ. ಜಿಲ್ಲಾಧಿಕಾರಿ, ತಹಶೀಲ್ದಾರರು ನೀಡಿರುವ ಹಕ್ಕುಪತ್ರಕ್ಕೆ ಬೆಲೆ ಇಲ್ಲ ಎಂದು ಅರಣ್ಯ ಇಲಾಖೆ ಹೇಳುತ್ತಿದೆ. ಹಾಗಾದರೆ ಇನ್ಯಾರು ಕೊಡುವ ಹಕ್ಕುಪತ್ರಕ್ಕೆ ಬೆಲೆ ಇದೆ? ರೈತರು ತಮ್ಮ ಭೂಮಿಗಾಗಿ ಬೀದಿಗಿಳಿಯುವ ದುಸ್ಥಿತಿ ಎದುರಾಗಿರುವುದು ವಿಪರ್ಯಾಸ.

– ತೀ.ನಾ.ಶ್ರೀನಿವಾಸ್‌, ಜಿಲ್ಲಾ ಸಂಚಾಲಕ, ಮಲೆನಾಡು ಭೂ ರಹಿತ ರೈತರ ಹೋರಾಟ ವೇದಿಕೆ

Anandapura-farmers-protest-in-Sagara.

ರೈತರು ದಶಕಗಳಿಂದ ಕೃಷಿ ಮಾಡುತ್ತಿದ್ದೇವೆ. ಮನೆ, ಕೊಟ್ಟಿಗೆ ಕಟ್ಟಿಕೊಂಡಿದ್ದೇವೆ. ಸರ್ಕಾರಿ ಶಾಲೆ, ಆಸ್ಪತ್ರೆಗಳು ಇಲ್ಲಿವೆ. 2012ರಲ್ಲಿ ಹಕ್ಕುಪತ್ರ ನೀಡಲಾಗಿತ್ತು. ಈಗ ಅರಣ್ಯ ಇಲಾಖೆ ನೊಟೀಸ್‌ ನೀಡಿದೆ. ಯಾರೋ ಅಧಿಕಾರಿಯ ತಪ್ಪಿಗೆ ರೈತರು ಜಮೀನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಮೀಸಲು ಅರಣ್ಯ ಘೋಷಣೆಯೇ ಅವೈಜ್ಞಾನಿಕವಾಗಿದ್ದು, ನಾಲ್ಕು ವರ್ಷದಿಂದ ನಿರಂತರ ಹೋರಾಟ ನಡೆಸುತ್ತಿದ್ದೇವೆ.

– ಗಂಗಾಧರ್‌, ರೈತ

NFC-Chicken-Kabab

ಪ್ರತಿಭಟನೆಯಲ್ಲಿ ಪರಮೇಶ್ವರ ದೂಗೂರು, ಗಣಪತಿ, ಸಂಪೆಕಟ್ಟೆ ‍ಶ್ರೀಕರ ಭಟ್‌, ದಿನೇಶ ಶಿರವಾಳ, ಜ್ಯೋತಿ ಯಡೇಹಳ್ಳಿ, ಷಣ್ಮುಖ, ರಾಜು ದೇವಾಡಿಗ, ಗಂಗಾಧರ ಸೇರಿದಂತೆ ಹಲವರು ಭಾಗವಹಿಸಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಶುರುವಾಗಲಿಲ್ಲ ಸಿಟಿ ಬಸ್‌, ಪರಿಶೀಲಿಸಿದ ಡ್ರೈವರ್‌ಗೆ ಕಾದಿತ್ತು ಶಾಕ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 14, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment