ಜೋಗ ಜಲಪಾತ, ಪ್ರವಾಸಿಗರಿಗೆ ಮತ್ತೆ ನಿಷೇಧ, ಎಷ್ಟು ದಿನ? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾಲಮಿತಿಯೊಳಗೆ ಮುಖ್ಯ ದ್ವಾರದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಜೋಗ ಜಲಪಾತ (Jog Falls) ವೀಕ್ಷಣೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಬಂಧವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಜೋಗ ಜಲಪಾತದಲ್ಲಿ (Jog Falls) ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಮುಖ್ಯದ್ವಾರದ ಕಾಮಗಾರಿ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಜ.1 ರಿಂದ ಮಾ.15ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಕಾಲಮಿತಿಯೊಳಗೆ ಮುಖ್ಯದ್ವಾರದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಏಪ್ರಿಲ್‌ 30ರವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. 

NFC-Chicken-Kabab

ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ಸಂಪರ್ಕಿಸಬಹುದಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment