ಸೊರಬದ ವ್ಯಕ್ತಿಗೆ 4 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಶಿವಮೊಗ್ಗ ಕೋರ್ಟ್‌, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ಸೊರಬ ತಾಲೂಕು ಚಿಟ್ಟೂರು ಗ್ರಾಮದ ವಾಸಿ ನಿಂಗರಾಜ (47) ತಮ್ಮ ಶುಂಠಿ ಹೊಲದಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಆರೋಪ ದೃಢಪಟ್ಟಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಅಪರಾಧಿಗೆ 4 ವರ್ಷ ಕಠಿಣ ಕಾರಾಗೃಹ (Jail) ವಾಸ ಶಿಕ್ಷೆ ನೀಡಿ ಸೋಮವಾರ ಆದೇಶಿಸಿದ್ದಾರೆ.

ಶುಂಠಿ ಹೊಲದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಖಚಿತ ಮಾಹಿತಿ ಮೇರೆಗೆ ಸೊರಬ ವಲಯ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ಸಿಬ್ಬಂದಿ 2022ರ ಸೆಪ್ಟೆಂಬರ್ 8ರಂದು ದಾಳಿ ನಡೆಸಿದ್ದರು. ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Shivamogga-Court-Balaraja-Urs-Road

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಅಪರಾಧಿಗೆ 4 ವರ್ಷಗಳ ಕಠಿಣ ಕಾರಾಗೃಹ (Jail) ವಾಸ ಸಜೆ ಮತ್ತು 25 ಸಾವಿರ ರೂ. ದಂಡ, 300 ಗ್ರಾಂ ಒಣ ಗಾಂಜಾ ಹೊಂದಿದ್ದಕ್ಕೆ 6 ತಿಂಗಳು ಕಠಿಣ ಕಾರಾಗೃಹವಾಸ ಸಜೆ ಮತ್ತು 5000 ರೂ. ದಂಡ ವಿಧಿಸಿ ಆದೇಶಿಸಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸಾಗರ, ಸೊರಬ, ಶಿಕಾರಿಪುರದಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

Leave a Comment