ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ : ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ (Raid) ನಡೆಸಿದ ಪೊಲೀಸರು ನೂರು ಕೆ.ಜಿ ಗೋಮಾಂಸ ಮತ್ತು ಗೋವುಗಳನ್ನು ರಕ್ಷಿಸಲಾಗಿದೆ. ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿಯ ಅನ್ವರ್ ಕಾಲೋನಿಯ ಮನೆಯೊಂದರಲ್ಲಿ ಗೋವಧೆ ಮಾಡಿ ಗೋಮಾಂಸ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Raid) ನಡೆಸಿದ್ದಾರೆ. ದಾಳಿ ವೇಳೆ 104 ಕೆ.ಜಿ ಗೋಮಾಂಸ, ಕಬ್ಬಿಣದ ಮಚ್ಚು, ಚೂರಿ, ಎಲೆಕ್ಟ್ರಾನಿಕ್ ತೂಕದ ಯಂತ್ರ, 15 ಕಬ್ಬಿಣದ ಹುಕ್ಕುಗಳು, 810 ರೂ. ನಗದು ಪತ್ತೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗಾಳಿ, ಬೆಳಕು ಇಲ್ಲದೆ ಇರುವ ಸ್ಥಳದಲ್ಲಿ ಒಂದು ಗೋವು, ಒಂದು ಕೋಣ, 13 ಕರುಗಳನ್ನು ಕಟ್ಟಿ ಹಾಕಲಾಗಿತ್ತು. ಘಟನೆ ಸಂಬಂಧ ಕಮ್ರುದ್ದಿನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್, ಮೊಬೈಲ್‌ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು
















