BREAKING NEWS – ಭದ್ರಾವತಿಯಲ್ಲಿ ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಭದ್ರಾವತಿ : ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್‌ ಆಗಲು ಯತ್ನಿಸಿದ್ದ ರೌಡಿ ಶೀಟರ್‌ (Rowdy Sheeter) ಕಡೇಕಲ್‌ ಅಬೀದ್‌ ಕಾಲಿಗೆ ಗುಂಡು ಹಾರಿಸಲಾಗಿದೆ. ಪೇಪರ್‌ ಟೌನ್‌ ಇನ್ಸ್‌ಪೆಕ್ಟರ್‌ ನಾಗಮ್ಮ, ರೌಡಿ ಶೀಟರ್‌ ಕಡೇಕಲ್‌ ಅಬೀದ್‌ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಕೊಲೆ ಯತ್ನ ಪ್ರಕರಣದರಲ್ಲಿ ರೌಡಿ ಶೀಟರ್‌ (Rowdy Sheeter) ಕಡೇಕಲ್‌ ಅಬೀದ್‌ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಈತನ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇನ್ಸ್‌ಪೆಕ್ಟರ್‌ ನಾಗಮ್ಮ ನೇತೃತ್ವದ ತಂಡ ಬಂಧಿಸಲು ಯತ್ನಿಸಿತು. ಈ ಸಂದರ್ಭ ಕಡೇಕಲ್‌ ಅಬೀದ್‌ ಪೊಲೀಸ್‌ ಸಿಬ್ಬಂದಿ ಅರುಣ್‌ ಮೇಲೆ ದಾಳಿ ನಡೆಸಿದ್ದಾನೆ ಎಂದು ಜಿಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

BHADRAVATHI-BREAKING-NEWS.jpg

ಪೊಲೀಸ್‌ ಸಿಬ್ಬಂದಿ ಅರುಣ್‌ ಮೇಲೆ ದಾಳಿ ನಡೆಸಿ ಕಡೇಕಲ್‌ ಅಬೀದ್‌ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್‌ ನಾಗಮ್ಮ, ಕಡೇಕಲ್‌ ಅಬೀದ್‌ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್‌ ಸಬ್ಬಂದಿ ಅರುಣ್‌ ಕುಮಾರ್‌ ಮತ್ತು ಕಡೇಕಲ್‌ ಅಬೀದ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

Web-Design

ಕಡೇಕಲ್‌ ಅಬೀದ್‌ ವಿರುದ್ಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕೊಲೆ, ರಾಬರಿ, ಕೊಲೆ ಯತ್ನ ಸೇರಿ ಒಟ್ಟು 20 ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಡಿವೈಎಸ್‌ಪಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment