ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ರಾಜ್ಯ ಸರಕಾರದ ವಿರುದ್ಧ ಏ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜನಾಕ್ರೋಶ ಸಭೆ, ಅಹೋರಾತ್ರಿ ಧರಣಿ (Protest) ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಆಹಾರ ಪದಾರ್ಥಗಳ ಬೆಲೆ ಏರಿದೆ. ರೈತರಿಗೆ ಸಹಾಯ ಮಾಡುವ ನೆಪದಲ್ಲಿ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದರು.
![]() |
ಬೆಲೆ ಏರಿಕೆ ವಿರುದ್ಧ ನಡೆಯುವ ಅಹೋರಾತ್ರಿ ಹೋರಾಟದಲ್ಲಿ ಜಿಲ್ಲೆಯ 400 ಜನ ಪ್ರಮುಖರು ಭಾಗವಹಿಸಲಿದ್ದಾರೆ. ಏ.7ರಿಂದ ರಾಜ್ಯದ ವಿವಿಧೆಡೆ ಹೋರಾಟ ಪ್ರಾರಂಭಿಸಲಾಗುವುದು.
– ಎಸ್.ಎನ್.ಚನ್ನಬಸಪ್ಪ, ಶಾಸಕ
ಎರಡು ವರ್ಷದಲ್ಲಿ ಹಾಲಿನ ದರವನ್ನು ಒಟ್ಟು 9 ರೂ. ಏರಿಸಿದ್ದಾರೆ. ಆಸ್ತಿ ನೋಂದಣಿ ಶುಲ್ಕ ಶೇ.600, ಸರ್ಕಾರಿ ಕಾಲೇಜು ಶುಲ್ಕ ಶೇ.10, ಆಸ್ಪತ್ರೆ ಸೇವಾ ಶುಲ್ಕ ಸೇರಿದಂತೆ ಬಹುತೇಕ ಎಲ್ಲ ಸೇವೆಗಳ ಶುಲ್ಕ ಹೆಚ್ಚಿದೆ. ಯಾವುದೆ ಶುಲ್ಕ ಹೆಚ್ಚಿಸುವುದಿಲ್ಲ ಎಂದ ಕಾಂಗ್ರೆಸ್ ಈಗ ನಿರಂತರ ಬೆಲೆ ಏರಿಕೆಯಲ್ಲಿ ತೊಡಗಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಕಾಂಗ್ರೆಸ್ ಬೆಲೆ ಏರಿಕೆ ಮೊರೆ ಹೋಗಿದೆ ಎಂದು ಆರೋಪಿದರು.
ನೈಸರ್ಗಿಕ ತೈಲದ ದರ ಕಡಿಮೆಯಾದರೂ ರಾಜ್ಯ ಸರಕಾರ 3 ರೂ. ಹೆಚ್ಚಿಸಿದೆ. ಬಿಜೆಪಿ ಶಾಸಕರ ಅಮಾನತು ವಾಪಸ್ ತೆಗೆದುಕೊಳ್ಳುವಂತೆ ಒತ್ತಾಯಿಸಿ ಏ.2ರಂದು ವಿಧಾನಸೌಧದ ಎದುರಿನ ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುವುದು. ಬಿಜೆಪಿ ಶಾಸಕರು ಯಾವುದೆ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ.
– ಡಿ.ಎಸ್.ಅರುಣ್, ವಿಧಾನ ಪರಿಷತ್ ಸದಸ್ಯ
ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಪ್ರಮುಖರಾದ ಹರಿಕೃಷ್ಣ, ಮಾಲತೇಶ್, ವಿನ್ಸೆಂಟ್ ರೋಡ್ರಿಗಸ್, ಸುಮಲತಾ ಭೂಪಾಳಂ ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200