ಸಾಗರದ ಉಪ ಕಾರಗೃಹಕ್ಕೆ ಎಂಎಲ್‌ಎ ಭೇಟಿ, ಕಟ್ಟಡ ದುರಸ್ತಿ ಕಾಮಗಾರಿ ಪರಿಶೀಲನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಾಗರ : ವರದಾ ರಸ್ತೆಯಲ್ಲಿರುವ ಉಪ ಕಾರಾಗೃಹ ಕಟ್ಟಡದ (Jail Building) ರಿಪೇರಿ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ. ಶೀಘ್ರವೇ ನವೀಕೃತ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಉಪ ಕಾರಾಗೃಹ ಕಟ್ಟಡದ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾಗಿದ್ದ ಉಪ ಕಾರಾಗೃಹ ಕಟ್ಟಡ ಶಿಥಿಲಗೊಂಡಿದ್ದ ಕಾರಣ ನವೀಕೃತ ಕಟ್ಟಡ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಕಟ್ಟಡದ ನವೀಕರಣಕ್ಕೆ 1.16 ಕೋಟಿ ರೂ. ಮಂಜೂರಾಗಿದೆ. ಕಾರಾಗೃಹದ ವಾರ್ಡನ್ ಹಾಗೂ ಸಿಬ್ಬಂದಿ ವರ್ಗದವರಿಗೆ ವಸತಿ ಗೃಹ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಕಾರಾಗೃಹದ ಆವರಣದಲ್ಲಿ ಉದ್ಯಾನ ನಿರ್ಮಿಸಲಾಗುವುದು.

– ಬೇಳೂರು ಗೋಪಾಲಕೃಷ್ಣ, ಶಾಸಕ

MLA-Beluru-Gopalakrishna-visits-sub-jail-in-sagara

ಕಾರಾಗೃಹಗಳ ಮುಖ್ಯ ಅಧೀಕ್ಷಕ ಡಾ. ಪಿ.ರಂಗನಾಥ್‌, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ ಸೇರಿ ಹಲವರು ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸ್ನೇಹಿತನಿಂದಲೇ ವ್ಯಕ್ತಿಯ ಕೊಲೆ, ಹೇಗಾಯ್ತು ಘಟನೆ?

MLA-Beluru-Gopalakrishna-visits-sub-jail-in-sagara

Leave a Comment