ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನ ವಿವಾದ ಸಂಬಂಧ ರಾಷ್ಟ್ರಭಕ್ತರ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ತರಾಟೆಗೆ (Angry) ತೆಗೆದುಕೊಂಡರು.
ಜಿಲ್ಲಾಧಿಕಾರಿ ಕಚೇರಿ ಎದುರು ರಾಷ್ಟ್ರಭಕ್ತರ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಆಗಮಿಸಿದ್ದರು. ಈ ಸಂದರ್ಭ ಕೆರಳಿದ ಈಶ್ವರಪ್ಪ, ತಮ್ಮ ವಿರುದ್ಧದ ಸುಮೋಟೊ ಪ್ರಕರಣವನ್ನು ಉಲ್ಲೇಖಿಸಿ ಜಿಲ್ಲಾ ರಕ್ಷಣಾಧಿಕಾರಿಯನ್ನ ತರಾಟೆಗೆ ತೆಗೆದುಕೊಂಡರು.
‘ದನ ಕಾಯೋಕೆ ಬಂದಿದ್ದೇವಾ?ʼ

‘ನಿಮ್ಮ ಇಲಾಖೆ ಬದುಕಿದೆಯೋ ಇಲ್ಲವೊ ಗೊತ್ತಿಲ್ಲ. ರೈಲ್ವೆ ಇಲಾಖೆಯ ಕಂಬಿ ತಂದು ಮೈದಾನಕ್ಕೆ ಬೇಲಿ ಹಾಕಿದ್ದರು. ಅವರನ್ನು ಈತನಕ ಬಂಧಿಸಿಲ್ಲ. ಮತ್ಯಾಕೆ ನೀವು ಎಸ್.ಪಿ ಆಗಿದ್ದೀರ? ನಾವೇನು ಇಲ್ಲಿ ದನ ಕಾಯೋಕೆ ಬಂದಿದ್ದೇವಾ? ಈ ಹಿಂದೆ ನಾನು ಭಾಷಣ ಮಾಡಿದ್ದಕ್ಕೆ ಪ್ರಕರಣ ದಾಖಲಿಸಿದ್ದೀರಿ. ಆಗ ಯಾರಾದರು ನಿಮಗೆ ದೂರು ನೀಡಿದ್ದರಾ? ಆದ್ದರಿಂದ ಕೂಡಲೆ ಕ್ರಮ ಕೈಗೊಳ್ಳಬೇಕುʼ ಎಂದು ಈಶ್ವರಪ್ಪ ಆಗ್ರಹಿಸಿದರು. ಆಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಮನವಿ ನೀಡುವಂತೆ ತಿಳಿಸಿದರು. ಇದರಿಂದ ಕೆರಳಿದ ಈಶ್ವರಪ್ಪ, ‘ಮನವಿ ಕೊಡಬೇಕು ಎಂದು ನೀವು ಹೇಳಬೇಕ? ನಿಮಗೆ ಕಣ್ಣು ಕಾಣುವುದಿಲ್ಲವೆ?ʼ ಎಂದು ಪ್ರಶ್ನಿಸಿದರು.

ಇದನ್ನೂ ಓದಿ » ನೆಹರು ಸ್ಟೇಡಿಯಂನಲ್ಲಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ, ಪ್ರತಿಜ್ಞೆ ಸ್ವೀಕಾರ, ಯಾರೆಲ್ಲ ಏನೆಲ್ಲ ಮಾತಾಡಿದರು?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





