ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು ಎರಡು ಕೋಟಿ ರೂ. ಹಣ ಕಳೆದುಕೊಂಡು ಪೇಚಿಗೆ ಸಿಲುಕಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್ ವಸಕ್ಕೆ, ಕಾರಣವೇನು?
ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೆ ಅವರನ್ನು ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದ ವೈದ್ಯರಿಗೆ 65 ಸಾವಿರ ರೂ. ಲಾಭಾಂಶ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನಂತರ 1.5 ಕೋಟಿ ರೂ. ಹೂಡಿಕೆ ಮಾಡಿದರೆ 25 ಕೋಟಿ ರೂ. ಲಾಭ ಗಳಿಸಬಹುದು ಎಂದು ನಂಬಿಸಿದ್ದರು. ಇಷ್ಟು ಹಣವಿರದ ಹಿನ್ನೆಲೆ ವೈದ್ಯರು ತಮ್ಮ ಇಬ್ಬರು ಸ್ನೇಹಿತರಿಂದ ಹಣ ಹೂಡಿಕೆ ಮಾಡಿಸಿದ್ದರು. ಲಾಭದಲ್ಲಿ ಮೂವರು ಹಂಚಿಕೊಳ್ಳುವ ಕುರಿತು ಮಾತನಾಡಿಕೊಂಡಿದ್ದರು. 1.50 ಕೋಟಿ ರೂ. ಹೂಡಿಕೆ ಮತ್ತು ತೆರಿಗೆ ಹಣವನ್ನು ಪಾವತಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹೂಡಿಕೆ ಮತ್ತು ಲಾಭಾಂಶದ ಕುರಿತು ವಿಚಾರಿಸಲು ಕರೆ ಮಾಡಿದಾಗ ವಂಚನೆಗೊಳಗಾಗಿದ್ದು ಅರಿವಿಗೆ ಬಂದಿದೆ. ಈ ಹಿನ್ನೆಲೆ 2.19 ಕೋಟಿ ರೂ. ವಂಚನೆಯಾಗಿದೆ ಎಂದು ಆರೋಪಿಸಿ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






