ಶಿವಮೊಗ್ಗದಲ್ಲಿ ಬೆಳಗ್ಗೆ ದೇಗುಲಕ್ಕೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದೇವರ ವಿಗ್ರಹಗಳೇ ಮಾಯ, ಆಗಿದ್ದೇನು?

ಶಿವಮೊಗ್ಗ : ದೇವಸ್ಥಾನವೊಂದರ (Temple) ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮೂರ್ತಿಗಳನ್ನೇ ಕದ್ದೊಯ್ದಿದ್ದಾರೆ. ಶಿವಮೊಗ್ಗ ನಗರದ ಆನಂದರಾವ್‌ ಬಡಾವಣೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ

ಬೆಳಗ್ಗೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಬಾಗಿಲಿಗೆ ಹಾಕಿದ್ದ ಬೀಗ ಮುರಿಯಲಾಗಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಹುಂಡಿ ಒಡೆದು ಸುಮಾರು 8 ಸಾವಿರ ರೂ. ಕಳ್ಳತನ ಮಾಡಲಾಗಿತ್ತು. ಇನ್ನು, ಒಳಗಿದ್ದ ಚೌಡೇಶ್ವರಿ ಮತ್ತು ಗಣಪತಿ ದೇವರ ಹಿತ್ತಾಳೆ ವಿಗ್ರಹಗಳು ಸೇರಿದಂತೆ ಒಟ್ಟು 40 ಸಾವಿರ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಆರೋಪಿಸಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಘಟನೆ ಸಂಬಂಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
Police-Jeep-With-Light-New.

Leave a Comment