ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜನಸ್ಪಂದನ, ಈ ಬಾರಿ ಹೊಸನಗರದಲ್ಲಿ ಅಹವಾಲು ಸ್ವೀಕಾರ, ಯಾವಾಗ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೇತೃತ್ವದಲ್ಲಿ ಏ.21 ರಂದು ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನʼ (Janaspandana) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್‌, ದಾಖಲಾಯ್ತು ಕೇಸ್‌, ಏನಿದೆ ವಿಡಿಯೋದಲ್ಲಿ?

ಕಾರ್ಯಕ್ರಮದಲ್ಲಿ (Janaspandana) ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.

ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೆ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‌ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Minister-Madhu-Bangarappa-Press-meet-about-budget
ಶಿವಮೊಗ್ಗ ಪತ್ರಿಕಾ ಭವನದಲ್ಲಿ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿದರು.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment