ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌, ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈತನಕ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ : ಸಿ.ಇ.ಟಿ ಪರೀಕ್ಷೆ ಬರೆಯಲು ಕೇಂದ್ರದೊಳಗೆ ತೆರಳುವಾಗ ವಿದ್ಯಾರ್ಥಿಗಳ ಜನಿವಾರ (sacred thread) ಮತ್ತು ಕಾಶಿದಾರ ತೆಗೆಸಿದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿದೆ. ಇನ್ನೊಂದೆಡೆ, ಸಚಿವರು, ಶಾಸಕರು ಸೇರಿ ಹಲವು ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಬುಧವಾರ ಮತ್ತು ಗುರುವಾರ ಸಿ.ಇ.ಟಿ ಪರೀಕ್ಷೆ ನಡೆಯಿತು. ಶಿವಮೊಗ್ಗದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇದ್ದ ಸಿ.ಇ.ಟಿ ಸೆಂಟರ್‌ನಲ್ಲಿ, ಮೂವರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಸೂಚಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳ ಜನಿವಾರ (sacred thread) ತೆಗೆಸಲಾಗಿದ್ದು, ಮತ್ತೊಬ್ಬ ವಿದ್ಯಾರ್ಥಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈತನಕ ಏನೇನು ಬೆಳವಣಿಗೆ ಆಗಿದೆ?

point-1ಖಾಸಗಿ ಶಿಕ್ಷಣ ಸಂಸ್ಥೆಯ ಸಿ.ಇ.ಟಿ ಪರೀಕ್ಷಾ ಕೇಂದ್ರದಲ್ಲಿ ಬುಧವಾರ ಪರೀಕ್ಷೆಗೆ ಬಂದ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳ ಜನಿವಾರ (sacred thread) ತೆಗೆಸಲಾಗಿದೆ. ಮತ್ತೊಬ್ಬ ವಿದ್ಯಾರ್ಥಿ ವಿರೋಧ ವ್ಯಕ್ತಪಡಿಸಿದ್ದಾನೆ. ಆತನ ಕೈಯಲ್ಲಿದ್ದ ಕಾಶಿದಾರ ತೆಗೆಯಲಾಗಿದೆ ಎಂದು ಆರೋಪಿಸಲಾಗಿದೆ.

point-2ಖಾಸಗಿ ಶಿಕ್ಷಣ ಸಂಸ್ಥೆ ಎದುರು ಬ್ರಾಹ್ಮಣ ಸಂಘದ ಪ್ರಮುಖರು ಜನಿವಾರ ತೆಗೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಸೆಕ್ಯೂರಿಟಿ ಮತ್ತು ಬ್ರಾಹ್ಮಣ ಸಂಘದ ಪ್ರಮುಖರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Sacred-Thread-controversy-complaint-filed
ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬ್ರಾಹ್ಮಣ ಮಹಾಸಭಾದ ಪ್ರಮುಖರು.

point-3ಜನಿವಾರ ಮತ್ತು ಕಾಶಿದಾರ ತೆಗೆಸಿದ್ದನ್ನು ಖಂಡಿಸಿ ಬ್ರಾಹ್ಮಣ ಸಂಘದ ಪ್ರಮುಖರು ಗುರುವಾರ ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ » ಕೋಟೆ ಆಂಜನೇಯ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ನಿಧನ

point-4ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಶಿಕ್ಷಣ ಸಂಸ್ಥೆಯಲ್ಲಿದ್ದ ಸಿಸಿಟಿವಿ ಕ್ಯಾಮರಾದ ವಿಡಿಯೋ ದೃಶ್ಯಾವಳಿಯನ್ನ ಪಡೆದಿರುವ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.

point-5ಜನಿವಾರ ಕತ್ತರಿಸಲು ಸೂಚಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬ್ರಾಹ್ಮಣ ಮಹಾಸಭಾದ ವತಿಯಿಂದ ಶುಕ್ರವಾರ ಸಂಜೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಜನಪ್ರತಿನಿಧಿಗಳು, ಸಂಘಟನೆಗಳ ಆಕ್ರೋಶ

ಜನಿವಾರ ಮತ್ತು ಕಾಶಿದಾರ ತೆಗೆಸಿದ್ದಕ್ಕೆ ಸಚಿವರು, ಶಾಸಕರು, ವಿವಿಧ ಸಂಘಟನೆಗಳ ಪ್ರಮುಖರು ತೀವ್ರ ವಿರೋಧ ವ್ಯಕ್ತಪಡಿಸಿದರು. ಸಚಿವರುಗಳು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಯಾರೆಲ್ಲ ಏನೆಲ್ಲ ಹೇಳಿದರು. ಇಲ್ಲಿದೆ ವಿವರ.

Sacred-Thread-controversy-complaint-filed
ಶಿಕ್ಷಣ ಸಂಸ್ಥೆ ಮುಂಭಾಗ ಜಮಾಯಿಸಿದ್ದ ಬ್ರಾಹ್ಮಣ ಮಹಾಸಭಾದ ಪ್ರಮುಖರು.

ಇಂತಹ ಸೂಚನೆ ನೀಡಿದವರು ಯಾರು ಎಂಬುದು ಪರಿಶೀಲಿಸಬೇಕಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಸಂಬಂಧಪಟ್ಟ ಇಲಾಖೆ ಜೊತೆಗೆ ಚರ್ಚೆ ನಡೆಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಾತಿ, ಧರ್ಮದ ನಂಬಿಕೆಗಳಿಗೆ ಗೌರವ ಕೊಡುವ ಕೆಲಸ ಮಾಡಬೇಕು.

Kalleshwara-Enterprises.webp

ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ

Sacred-Thread-controversy-complaint-filed

ಸಿ.ಇ.ಟಿ ಕೇಂದ್ರದಲ್ಲಿ ಜನಿವಾರ, ಶಿವದಾರ, ರುದ್ರಾಕ್ಷಿಸರವನ್ನು ತೆಗೆಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಇದರಿಂದ ಹಿಂದೂಗಳ ಭಾವನೆಗೆ ತೀವ್ರ ಧಕ್ಕೆ ಉಂಟಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದೆ ಹೀಗೆ ಆಗದಂತೆ ಕ್ರಮ ವಹಿಸಬೇಕು.

ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ

ಶಿವಮೊಗ್ಗದ ಕಾಲೇಜು ಒಂದರಲ್ಲಿ ಪರೀಕ್ಷೆಗೆ ತೆರಳಿದ್ದ ವೀರಶೈವ–ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳ ಕೊರಳಲ್ಲಿದ್ದ ಶಿವದಾರ ಹಾಗೂ ರುದ್ರಾಕ್ಷಿ ತೆಗೆಸಲಾಗಿದೆ. ಸರ್ಕಾರ ಸುತ್ತೋಲೆ ಹೊರಡಿಸದಿದ್ದರೂ ಇದನ್ನೆಲ್ಲಾ ತೆಗೆಸಿರುವ ಪರೀಕ್ಷಾ ಪ್ರಾಧಿಕಾರದ ಕ್ರಮ ಖಂಡನೀಯ.

ಹೆಚ್.ಸಿ.ಯೋಗೇಶ್‌, ಕಾಂಗ್ರೆಸ್‌ ಮುಖಂಡ

Sacred-Thread-controversy-complaint-filed
ದೊಡ್ಡಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ ಬ್ರಾಹ್ಮಣ ಮಹಾಸಭಾದ ಪ್ರಮುಖರು.

ಜನಿವಾರ, ಶಿವಾದಾರ ಹಾಗೂ ಇನ್ನಿತರ ಹಿಂದೂ ಧಾರ್ಮಿಕ ಸಂಕೇತಗಳನ್ನು ಒತ್ತಾಯಪೂರ್ವಕವಾಗಿ ತೆಗೆಸಿದ್ದು, ಅಧಿಕಾರಿಗಳು ತಮ್ಮ ವ್ಯಾಪ್ತಿ ಮೀರಿ ವರ್ತಿಸಿದ್ದಾರೆ. ಕರ್ತವ್ಯಲೋಪ ಎಸಗಿರುವವರ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ

ಸಿ.ಸಿ.ಟಿವಿ ಕ್ಯಾಮೆರಾ ಪರಿಶೀಲಿಸಿ ವಾರದೊಳಗೆ ವರದಿ ನೀಡುವಂತೆ ಪರೀಕ್ಷಾ ಕೇಂದ್ರಗಳ ನೋಡಲ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ್ದರೆ ಕ್ರಮ ಕೈಗೊಳ್ಳುತ್ತೇವೆ.

ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment