ಹವಾಮಾನ ವರದಿ : ಭಾನುವಾರ ಸುರಿದ ಭಾರಿ ಮಳೆಗೆ ಶಿವಮೊಗ್ಗದಲ್ಲಿ ತಂಪು ವಾತಾವರಣ ಇದೆ. ಇನ್ನೊಂದೆಡೆ ಇವತ್ತು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ನಿನ್ನೆಯ ಮಳೆಗೆ ಬಿಸಿಲಿನ ಧಗೆ ಕಡೆಮೆಯಾಗಿದೆ, ತಾಪಮಾನ ತುಸು ಇಳಿಕೆಯಾಗಿದೆ. (Weather)
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಸಾಗರದಲ್ಲಿ ಲಾರಿ, ಕಾರು ಪಲ್ಟಿ, ಅಪಘಾತಕ್ಕೆ ಕಾರಣ ಹಾವು, ಏನಿದು ಪ್ರಕರಣ?
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
