ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೂತನ ಕಚೇರಿ (Office) ನಗರದ ನೆಹರು ರಸ್ತೆ ಶಿವಪ್ಪನಾಯಕ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಆರಂಭಗೊಂಡಿದೆ. ಈ ಹಿಂದೆ ಇದೆ ಜಾಗದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಕಚೇರಿ ಇತ್ತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

ನೂತನ ಕಚೇರಿಯನ್ನು (Office) ಸಚಿವ ಮಧು ಬಂಗಾರಪ್ಪ ಬುಧವಾರ ಉದ್ಘಾಟನೆ ಮಾಡಿದರು.

ಜಿಲ್ಲೆಯ ಜನರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುವ ಸಲುವಾಗಿ ನೆಹರು ರಸ್ತೆಗೆ ಉಸ್ತುವಾರಿ ಸಚಿವರ ಕಚೇರಿಯನ್ನು ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಬಹುದಾದ ಸಮಸ್ಯೆಗಳ ಅಹವಾಲು ಸಲ್ಲಿಬಹುದು.

– ಮಧು ಬಂಗಾರಪ್ಪ, ಸಚಿವ

Minister-Madhu-Bangarappa-new-office-inaugurated

ಕಚೇರಿಯಲ್ಲಿ ಶಾಸಕಿ ಬಲ್ಕಿಸ್ ಬಾನು, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇರುತ್ತಾರೆ. ಕಚೇರಿಗೆ ಭೇಟಿ ನೀಡುವ ಜನರ ಸಮಸ್ಯೆಗಳನ್ನು ಆಲಿಸಿ, ಸ್ಪಂದಿಸುತ್ತಾರೆ. ಅವರೊಂದಿಗೆ ನಮ್ಮ ಕಚೇರಿ ಸಿಬ್ಬಂದಿ ಸಹ ಇರುತ್ತಾರೆ ಎಂದರು.

ಈ ಸಂದರ್ಭ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಸ್ ಬಾನು, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾ‌ರ್, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಸಂಸದ ಆಯನೂರು ಮಂಜುನಾಥ್ ಮತ್ತಿತರರು ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment