ಶಿವಮೊಗ್ಗದಲ್ಲಿ ಹಣ್ಣು, ಆಹಾರ ಮೇಳ, ಯಾವಾಗ? ಏನೆಲ್ಲ ಇರುತ್ತೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ನವುಲೆಯ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಏ.26 ರಿಂದ 28ರವರೆಗೆ ವೈವಿಧ್ಯಮಯ ಹಣ್ಣುಗಳು (Fruits) ಮತ್ತು ಆಹಾರ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ.ಜಗದೀಶ್ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ನವುಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೇಂದ್ರದ ಆವರಣದಲ್ಲಿ ಮೂರು ದಿನವೂ ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಮೇಳ ನಡೆಯಲಿದೆ. ವೈವಿಧ್ಯಮಯ ಮಾವಿನ ಹಣ್ಣು, ಹಲಸು, ಬಾಳೆ ಹಾಗೂ ವಿವಿಧ ಜಾತಿಯ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಎಂದರು.

Fruits mela at Shivappanayaka Agriculture University navule

ಪ್ರದರ್ಶನದ ಏನೇನಿರುತ್ತೆ? ಇಲ್ಲಿದೆ ಹೈಲೈಟ್‌

ARROW-MARK-POINTERಮಲೆನಾಡಿನ ವಿಶಿಷ್ಟ ಸಿಹಿ ಖಾದ್ಯಗಳಾದ ತೊಡೆದೇವು, ಅಪ್ಪೆಮಿಡಿ, ಹಲಸು, ಬಾಳೆ, ಅನಾನಸ್, ಅಂಜೂರ, ಗೇರು, ಮುರುಗಲು, ಪುನರ್ಪುಳಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳು, ಸಿರಿಧಾನ್ಯ ಮತ್ತು ಸ್ಥಳೀಯ ವಿಶಿಷ್ಟ ಖಾದ್ಯಗಳು ಇರಲಿವೆ.

ARROW-MARK-POINTERಜೇನುತುಪ್ಪದ ಮೌಲ್ಯವರ್ಧಿತ ಉತ್ಪನ್ನ ಮತ್ತು ದಾವಣಗೆರೆ ಬೆಣ್ಣೆದೋಸೆ, ಹುಬ್ಬಳ್ಳಿ ಮಿರ್ಚಿ ಮಂಡಕ್ಕಿ, ಆಲೂ ಟ್ವಿಸ್ಟರ್ ಖಾದ್ಯಗಳು ಮೇಳದ ಪ್ರಮುಖ ಆಕರ್ಷಣೆ.

ARROW-MARK-POINTERಕರಿಮೆಣಸು, ಕೋಕಂ, ಏಲಕ್ಕಿ, ದಾಲ್ಚಿನಿ, ಬಿದಿರು, ಕಾಫಿ, ಪುನರ್ಪುಳಿ, ಗೋಡಂಬಿ ಸೇರಿದಂತೆ ವಿವಿಧ ತಳಿಯ 8 ಲಕ್ಷ ಸಸಿಗಳು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿವೆ.

ARROW-MARK-POINTERಹಣ್ಣುಗಳ ಉತ್ಪನ್ನಗಳಾದ ಜ್ಯೂಸ್, ಜ್ಯಾಮ್, ಜೇನು, ಇತರೆ ಉತ್ಪನ್ನಗಳೂ ದೊರೆಯಲಿವೆ.

ARROW-MARK-POINTERಮೇಳದಲ್ಲಿ ಹಣ್ಣಿನ ಸಸಿಗಳ ನರ್ಸರಿ, ಆಲಂಕಾರಿಕ ಗಿಡಗಳು, ತರಕಾರಿ ಮತ್ತು ಹೂವಿನ ಬೀಜಗಳು, ತಾರಸಿ / ಕೈತೋಟದ ಪರಿಕರಗಳ ಮಾರಾಟ ಮಳಿಗೆಗಳು, ಆಲಂಕಾರಿಕ ಮೀನುಗಳು, ಬಾಳೆಯ ನಾರು, ಬಿದರಿನ ನಾರು ಮತ್ತು ಮಣ್ಣಿನಿಂದ ತಯಾರಿಸಿದ ಹಲವು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟವಿರುತ್ತದೆ.

ಮೇಳದಲ್ಲಿ 150 ಮಳಿಗೆ

150ಕ್ಕೂ ಹೆಚ್ಚಿನ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ, ರುಚಿಕರ ಹಣ್ಣು (Fruits) ಹಾಗೂ ರೈತರಿಗೆ, ಸ್ವಸಹಾಯ ಗುಂಪುಗಳಿಗೆ, ಉದ್ದಿಮೆದಾರರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವುದು ಈ ಮೇಳದ ಉದ್ದೇಶ ಎಂದು ಕುಲಪತಿ ಆರ್.ಸಿ.ಜಗದೀಶ್ ತಿಳಿಸಿದರು.

ರಜತ ಮಹೋತ್ಸವದ ಅಂಗವಾಗಿ ತಾಂತ್ರಿಕ ಸಮಾವೇಶ, ಮಕ್ಕಳಿಗೆ, ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿಜೇತರಿಗೆ ಆಕರ್ಷಕ ಬಹುಮಾನ ಮತ್ತು ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಗುವುದು ಎಂದರು.

ಕುಲಸಚಿವ ಕೆ.ಸಿ.ಶಶಿಧರ್, ಕೃಷಿ ಮಹಾವಿದ್ಯಾಲಯದ ಡೀನ್ ಡಿ.ತಿಪ್ಪೇಶ, ಸಹ ಸಂಶೋಧನಾ ನಿರ್ದೇಶಕ ಪ್ರದೀಪ್ ಪಾಲ್ಗೊಂಡಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment