ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕುವೆಂಪು ವಿವಿಯಲ್ಲಿ ಬಿ.ಇಡಿ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ (students) ಕಳೆದ 4 ವರ್ಷಗಳಿಂದ ಅಂಕಪಟ್ಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಇಡಿ ಪದವೀಧರರು ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್?
ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಸುಮಾರು 19ಕ್ಕೂ ಹೆಚ್ಚು ಬಿಇಡಿ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ 2021ರಿಂದ 2024ರವರೆಗೆ ಸುಮಾರು 2,500 ವಿದ್ಯಾರ್ಥಿಗಳು (students) ಪದವಿ ಪಡೆದಿದ್ದಾರೆ. ಆದರೆ, ಈವರಿಗೆ ಎರಡು ವರ್ಷದ ಯಾವುದೇ ಸೆಮಿಸ್ಟರ್‌ಗಳ ಮುದ್ರಿತ ಅಂಕಪಟ್ಟಿಯನ್ನು ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು 15 ದಿನಗಳೊಳಗೆ ಮುದ್ರಿತ ಅಂಕಪಟ್ಟಿ ನೀಡಬೇಕು. ಇಲ್ಲದಿದ್ದರೆ ಕುವೆಂಪು ವಿವಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ
ಬಂಜಾರ ಯುವಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ಗಿರೀಶ್, ಪ್ರಮುಖರಾದ ಉಮಾಮಹೇಶ್ವರ ನಾಯ್ಕ, ವೆಂಕಟೇಶ್, ಸ್ಪಂದನಾ, ರಮೇಶ್, ನರಸಿಂಹ, ಅಲೋಕ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





