ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಬುಧವಾರ ರಾತ್ರಿ ಲೈಟ್ ಆಫ್ (Lights Off) ಮಾಡಿ ಪ್ರತಿಭಟನೆ ನಡೆಸಲಾಯಿತು. ಮುಸ್ಲಿಂ ಸಮುದಾಯದವರು ತಮ್ಮ ಮನೆ, ಅಂಗಡಿ ಮುಂಗಟ್ಟುಗಳಲ್ಲಿ ವಿದ್ಯುತ್ ದೀಪ ಆರಿಸಿ ಮಸೂದೆಗೆ ಪ್ರತಿರೋಧ ವ್ಯಕ್ತಪಡಿಸಲಾಯಿತು.
ಮುಸ್ಲಿಂ ಸಮುದಾಯದವರು ಹೆಚ್ಚಿರುವ ಬಡಾವಣೆಗಳಲ್ಲಿ ವಿದ್ಯುತ್ ದೀಪಗಳನ್ನು ಆರಿಸಿ ಪ್ರತಿಭಟನೆ ನಡೆಸಲಾಯಿತು. ರಾತ್ರಿ 9 ಗಂಟೆಯಿಂದ 9.15ರವರೆಗೆ ಲೈಟ್‌ಗಳನ್ನು ಆರಿಸಲಾಗಿತ್ತು. ಮನೆಗಳ ದೀಪಗಳನ್ನು ಆರಿಸಿ, ಜನರು ಹೊರ ಬಂದು ಪ್ರತಿಭಟಿಸಿದರು.
ಇದಕ್ಕೂ ಮುನ್ನ ಮುಸ್ಲಿಂ ಸಮುದಾಯದ ಪ್ರಮುಖರು, ಮನೆ ಮನೆಗೆ ತೆರಳಿ ಪ್ರತಿಭಟನೆಗೆ ಅಗತ್ಯತೆ ವಿವರಿಸಿದರು. ಅಲ್ಲದೆ ಕರಪತ್ರಗಳನ್ನು ಹಂಚಿದ್ದರು. ದೇಶಾದ್ಯಂತ ಲೈಟ್ ಆರಿಸಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಲಾಗಿತ್ತು.

ಇದನ್ನೂ ಓದಿ » UPSC 2024 ಫಲಿತಾಂಶ: 1000ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಆಯ್ಕೆ, ಕರ್ನಾಟಕದ ವಿದ್ಯಾರ್ಥಿಗಳ ಭರ್ಜರಿ ಸಾಧನೆ

LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು





