ಕೂಲಿ ಹಣ ಕೇಳಿದ್ದಕ್ಕೆ ಚಾಕು, ಕತ್ತಿಯಿಂದ ಕುತ್ತಿಗೆ ಕೊಯ್ದವರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಹೊಸನಗರ ತಾಲ್ಲೂಕು ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ತಿಕೆರೆ ಗ್ರಾಮದ ಸತೀಶ್ ಶೆಟ್ಟಿ ಎಂಬವರನ್ನು ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಫಯಾಜ್ ಮತ್ತು ಕೃಷ್ಣ ಎಂಬವರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ (Life Term) ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗಿವ ಜಾವ ಬಸ್‌ ಹತ್ತಿದ ಮಹಿಳೆ, ಸ್ವಲ್ಪ ದೂರ ಹೋದ್ಮೇಲೆ ಕಾದಿತ್ತು ಆಘಾತ

ಸತೀಶ್ ಶೆಟ್ಟಿ ಅವರು ಫಯಾಜ್ ಹಾಗೂ ಕೃಷ್ಣ ಅವರೊಂದಿಗೆ ಗಾರೆ ಕೆಲಸ ಮಾಡುತ್ತಿದ್ದರು. ಕೂಲಿ ಹಣ ಪಾವತಿಸುವ ವಿಚಾರದಲ್ಲಿ ಮೂವರ ನಡುವೆ ಮನಸ್ತಾಪ ಉಂಟಾಗಿತ್ತು. 2021ರ ಡಿ.22ರಂದು ಅಪರಾಧಿಗಳು ಸತೀಶ್ ಶೆಟ್ಟಿ ಅವರನ್ನು ಅಮೃತ ಗ್ರಾಮದ ಕೆಳಗಿನ ಕೆರೆಯ ದಂಡೆಗೆ ಕರೆದುಕೊಂಡು ಹೋಗಿ ಕತ್ತಿ ಮತ್ತು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದರು.

ಅನುಮಾನ ಬರಬಾರದು ಎಂದು ಶವವನ್ನು ಕೆರೆಗೆ ಎಸೆದು ಸಾಕ್ಷ್ಯ ನಾಶ ಮಾಡಲು ಮುಂದಾಗಿದ್ದರು. ಕೆಲ ದಿನಗಳ ಬಳಿಕ ಶವ ನೀರಿನಲ್ಲಿ ತೇಲಿತ್ತು. ಸತೀಶ್ ಶೆಟ್ಟಿಯವರ ಭಾವ ರಾಜುಶೆಟ್ಟಿ, ಇದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ರಿಪ್ಪನ್ ಪೇಟೆ ಪೊಲೀಸರಿಗೆ ದೂರು ನೀಡಿದ್ದರು.

Shivamogga-Court-Balaraja-Urs-Road

ತನಿಖೆ ನಡೆಸಿದ ಪೊಲೀಸರು ಫಯಾಜ್ ಹಾಗೂ ಕೃಷ್ಣ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಭಾವತಿ ಜಿ., ಆರೋಪ ಸಾಬೀತಾದ ಕಾರಣ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಅಣ್ಣಪ್ಪ ನಾಯ್ಕ ವಾದ ಮಂಡಿಸಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2025

Leave a Comment