ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್‌ಪೇಟೆ: ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈಚೆಗೆ ಸದಸ್ಯರು (Members) ಪರಸ್ಪರ ಹಲ್ಲೆ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸದಸ್ಯರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸದಸ್ಯರಾದ ನಿರೂಪ್ ಕುಮಾರ್ ಹಾಗೂ ಸುಂದರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾನ್ಯ ಸಭೆಯಲ್ಲಿ ಭ್ರಷ್ಟಾಚಾರ ಹಾಗೂ ಅನಧಿಕೃತ ಲೇಔಟ್ ನಿರ್ಮಾಣದ ವಿಚಾರವಾಗಿ ನಡೆದ ಗದ್ದಲ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.
ಮಾಹಿತಿ ಅರಿತ ಪಿಎಸ್‌ಐ ಪ್ರವೀಣ್ ತಕ್ಷಣ ಸ್ಥಳಕ್ಕೆ ಬಂದು ಸದಸ್ಯರಿಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಸೂಚಿಸಿ, ಸಮಸ್ಯೆ ಇದ್ದರೆ ಠಾಣೆಗೆ ದೂರು ನೀಡಲು ಸೂಚಿಸಿದ್ದರು. ಗದ್ದಲದ ಕಾರಣ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಮಧ್ಯಾಹ್ನಕ್ಕೆ ಮುಂದೂಡಲಾಗಿತ್ತು. ಈ ಅವಧಿಯಲ್ಲಿ ಸದಸ್ಯರಿಬ್ಬರು ಹಲ್ಲೆ ಮತ್ತು ಪ್ರತಿ ಹಲ್ಲೆ ಕುರಿತು ಪಂಚಾಯಿತಿ ಪಕ್ಕದಲ್ಲೇ ಇದ್ದ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ » ಯುವತಿಯ ಫೇಸ್‌ಬುಕ್ ರಿಕ್ವೆಸ್ಟ್ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್

LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















