ಸಕ್ರೆಬೈಲು ಸಮೀಪ ಬೆಳ್ಳಂಬೆಳಗ್ಗೆ ಅಪಘಾತ, ವ್ಯಕ್ತಿ ಸಾವು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಸಕ್ರೆಬೈಲು ಸಮೀಪ ಘಟನೆ (Mishap) ಸಂಭವಿಸಿದೆ.

ಶ್ರೀಧರ್‌ (55) ಮೃತರು. ಇವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಲ್ಲದೆ ರಸ್ತೆ ಬದಿಗೆ ಇಳಿದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಶ್ರೀಧರ್‌ ಅವರನ್ನು ಕೂಡಲೆ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಪರೀಕ್ಷಿಸಿದ ವೈದ್ಯರು ‍ಶ್ರೀಧರ್‌ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ತಾಪಮಾನ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

Car-mishap-at-Sakrebyle-in-Shimoga

Arya-PU-College-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
Car-mishap-at-Sakrebyle-in-Shimoga

Leave a Comment