ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಟ್ಟಡಕ್ಕೆ ಕಬ್ಬಿಣದ ರಾಡ್‌ಗಳನ್ನು ಎಳೆಯುವಾಗ ಪಕ್ಕದಲ್ಲಿ ಹಾದು ಹೊಗಿದ್ದ ವಯರ್ ತಗುಲಿ ವಿದ್ಯುತ್ ಶಾಕ್‌ಗೆ (electrocution) ಕಾರ್ಮಿಕ ಸಾವನ್ನಪ್ಪಿದ್ದಾನೆ. ಸೋಮಿನಕೊಪ್ಪದ ನಿವಾಸಿ ನಿಜಾಮುಲ್ ಹಕ್ (32) ಮೃತ ವ್ಯಕ್ತಿ.

ಜೆ.ಹೆಚ್.ಪಟೇಲ್ ಬಡಾವಣೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸಕ್ಕೆ ನಿಜಾಮುಲ್ ಹಕ್ ತೆರಳಿದ್ದರು. ನೆಲದಿಂದ ಎರಡನೇ ಮಹಡಿಗೆ ಕಬ್ಬಿಣದ ರಾಡ್‌ಗಳನ್ನು ಎಳೆಯುವಾಗ ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಕಬ್ಬಿಣದ ರಾಡ್ ತಗುಲಿದೆ. ವಿದ್ಯುತ್ ಪ್ರವಹಿಸಿ ನಿಜಾಮುಲ್ ಹಕ್ ಅವರಿಗೆ ಶಾಕ್ ತಗುಲಿತ್ತು.
ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಈ ವೇಳೆಗಾಗಲೆ ಅವರು ಮೃತಪಟ್ಟಿದ್ದರು. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನಿರ್ಮಾಣ ಹಂತದ ಸರ್ಕಾರಿ ನೌಕರರ ಭವನಕ್ಕೆ ಮಧ್ಯಾಹ್ನ ಬಂದ ಸೂಪರ್‌ವೈಸರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





