ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಕ್ಫ್ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಿಮಿನಲ್ ಮೊಕದಮೆ (Criminal Case) ದಾಖಲಿಸಬೇಕು ಎಂದು ಆಗ್ರಹಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರ ನಿಯೋಗ ಜಿಲ್ಲಾ ರಕ್ಷಣಾಧಿಕಾರಿಗೆ ದೂರು ಸಲ್ಲಿಸಿದರು.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ಭೇಟಿಯಾದ ಬಿಜೆಪಿ ಮುಖಂಡರು, ಉಚ್ಛ ನ್ಯಾಯಾಲಯದ ಆದೇಶ ಧಿಕ್ಕರಿಸಿ ಸರ್ಕಾರದ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಿಮಿನಲ್ ಮೊಕದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.
ದೂರಿನಲ್ಲಿ ಏನೇನೆಲ್ಲ ಉಲ್ಲೇಖಿಸಲಾಗಿದೆ?
ವಕ್ಫ್ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಮೇ 3ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಹಿನ್ನೆಲೆ ವಿವಿಧ ರಸ್ತೆಗಳನ್ನು ಬಂದ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಲಾಗಿತ್ತು.
ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರಲಾಗಿದೆ.
ವಕ್ಫ್ ಕಾಯ್ದೆ ವಿಚಾರ ನ್ಯಾಯಾಲಯದಲ್ಲಿದೆ. ಅಲ್ಲದೆ ಕಾಯ್ದೆ ಸಂಬಂಧ ಪ್ರತಿಭಟನೆಗೆ ಯಾವುದೆ ಅನುಮತಿ ನೀಡಬಾರದು. ಪ್ರತಿಭಟನೆಗೆ ಅವಕಾಶ ಕಲ್ಪಿಸಬಾರದು ಎಂದು ನ್ಯಾಯಾಲಯ ಆದೇಶಿಸಿದೆ.
ನ್ಯಾಯಾಲಯದ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರವು ಪ್ರತಿಭಟನೆಗೆ ಅವಕಾಶ ಕಲ್ಪಿಸಿ, ಭದ್ರತೆ ಒದಗಿಸಿದೆ. ತಪ್ಪಿತಸ್ಥರೆಲ್ಲರ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕು.

ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಿವಮೊಗ್ಗ ಸೇರಿ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಲಾಗಿದೆ. ಹೋರಾಟ ಮಾಡಿದವರ ವಿರುದ್ದ ಎಫ್ಐಆರ್ ದಾಖಲಿಸಬೇಕು. ನ್ಯಾಯಾಲಯಕ್ಕೆ ಗೌರವ ಕೊಡಬೇಕು. ನ್ಯಾಯಾಲಯ ಹೇಳಿದ ಹಾಗೆ ಸರ್ಕಾರ ಪಾಲಿಸಬೇಕು.
– ಎಸ್.ಎನ್.ಚನ್ನಬಸಪ್ಪ, ಶಾಸಕ
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಜೆ.ಜಗದೀಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲೂ ಇದ್ದಾರಾ ಪಾಕಿಸ್ತಾನಿಯರು?, ‘ಪಾಕ್ ಪ್ರಜೆಗಳನ್ನು ಹೊರಗಟ್ಟಲು ಕಾಂಗ್ರೆಸ್ ಉದಾಸೀನʼ, ಸಂಸದ ಬೇಸರ


LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





