ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬಸವ ಜಯಂತಿ ಅಂಗವಾಗಿ ಸಾವಿರಕ್ಕು ಹೆಚ್ಚು ಮಂದಿ ವಚನ (Vachana) ಗಾಯನಕ್ಕೆ ಧ್ವನಿಯಾದರು. ಶಿವಮೊಗ್ಗದಲ್ಲಿಯೇ ಮೊದಲ ಬಾರಿಗೆ ಇಂತಹ ಪ್ರಯತ್ನವಾಗಿದ್ದು, ಬೃಹತ್ ವೇದಿಕೆ ಕಣ್ಸೆಳೆದರೆ, ಸಾವಿರ ಕಂಠಗಳಿಂದ ಹೊರಹೊಮ್ಮಿದ ವಚನಗಳು ಕಿವಿಗೆ ಮುದ ನೀಡಿದವು.
ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಬಸವ ಜಯಂತಿ ಆಚರಣಾ ಸಮಿತಿ ವತಿಯಿಂದ ಸಾವಿರದ ವಚನ ಕಾರ್ಯಕ್ರಮ ನಡೆಯಿತು. ಮಹಿಳೆಯರು, ಮಕ್ಕಳು, ವೃದ್ಧರು ಸೇರಿ 1404 ಮಂದಿ ಡಾ. ಸಿ.ಅಶ್ವಥ್ ಅವರ ರಾಗ ಸಂಯೋಜನೆಯಂತೆ ವಚನಗಳನ್ನು ಹಾಡಿದರು. ಬಸವ ಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಪ್ರತಿ ವಚನದ ಅರ್ಥ ತಿಳಿಸಿದರು.

ಇದಕ್ಕು ಮುನ್ನ ಬಸವಣ್ಣನವರ ಪ್ರತಿಮೆಗೆ ವಿವಿಧ ಮಾಠಧೀಶರು, ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಇವತ್ತು ಹಾಡಿದ 38 ವಚನಗಳು, ಅವುಗಳ ಅರ್ಥ ಇರುವ ಕಿರುಹೊತ್ತಿಗೆ ತೋರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಅಲ್ಲದೆ ಪಹಲ್ಗಾಮ್ ದಾಳಿಯಲ್ಲಿ ಮೃತರಾದವರಿಗೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.
ಜಿಲ್ಲೆ ಶರಣರ ನಾಡು. ಹಿರೇಜಂಬೂರಿನ ಸತ್ಯಕ್ಕ, ಅಜಗಣ್ಣ, ಪೋಡ ಶಿವಯ್ಯ, ಅಕ್ಕಮಹಾದೇವಿ, ಅಲ್ಲಮಪ್ರಭು ಹುಟ್ಟಿದ ಹಾಗೂ ದೇಶಕ್ಕೆ 40 ಶಿವಶರಣರನ್ನು ಕೊಟ್ಟ ನಾಡು ನಮ್ಮ ಶಿವಮೊಗ್ಗ. ರಾಜ್ಯದ ಇತಿಹಾಸದಲ್ಲೆ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ ಮಾಡಿದ್ದೇವೆ. ಇದು ಭೂಮಂಡಲದಲ್ಲೆ ದೊಡ್ಡ ಕಾರ್ಯಕ್ರಮ.
– ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯ

ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಿಳಕಿ ಮಠದ ಶ್ರೀ ರಾಚೋಟೇಶ್ವರ ಸ್ವಾಮೀಜಿ, ಹಾರನಹಳ್ಳಿ, ಜಡೆ ಮಠ ಸೇರಿದಂತೆ ಮಲೆನಾಡು ಮಠಾಧೀಶರ ಪರಿಷತ್ತಿನ ಸ್ವಾಮೀಜಿಗಳು, ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಡಾ. ಫ್ರಾನ್ಸಿಸ್ ಸೆರಾವೋ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರೇಣುಕಾಚಾರ್ಯ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಪ್ರಮುಖರಾದ ಹೆಚ್.ಆರ್.ಬಸವರಾಜಪ್ಪ, ಆರ್.ಪ್ರಸನ್ನಕುಮಾರ್, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯಕುಮಾರ್ ಸೇರಿ ಹಲವರು ಇದ್ದರು.
















Vachana Gayana in Shimoga City

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






