ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಮೇ 14ರಂದು ಬೆಂಗಳೂರಿನಲ್ಲಿ ತಿರಂಗ ಯಾತ್ರೆ ಆರಂಭವಾಗಲಿದೆ ಎಂದರು.

ಮೇ 15ರಂದು ಮಂಗಳೂರು, ಬೆಳಗಾವಿ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ನಡೆಯಲಿದೆ. ಮೇ 16ರಂದು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಯಾತ್ರೆ ನಡೆಯಲಿದೆ. ಮೇ 18 ರಿಂದ 23ರವರಗೆ ತಾಲೂಕು ಕೇಂದ್ರಗಳಲ್ಲಿ ಯಾತ್ರೆ ನಡೆಯಲಿದೆ. ನಿವೃತ್ತ ಯೋಧರು, ಅವರ ಕುಟುಂಬದವರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಜನರನ್ನು ತೊಡಗಿಸಿಕೊಳ್ಳಲಾಗುತ್ತದೆ. ಈ ಯಾತ್ರೆ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಯೋಜನೆ ರೂಪಿಸಿದೆ ಎಂದು ತಿಳಿಸಿದರು.

ದೇಶದ ಯೋಧರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸ ಇದಾಗಿದೆ. ತಿರಂಗ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಭಾಗವಹಿಸಲಿದ್ದಾರೆ. ಮೇ 16ರಂದು ಶಿವಮೊಗ್ಗದಲ್ಲಿ ನಡೆಯುವ ತಿರಂಗ ಯಾತ್ರೆಯಲ್ಲಿ ನಾನು ಭಾಗವಹಿಸಲಿದ್ದೇನೆ ಎಂದು ವಿಜಯೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ಚಂದ್ರಶೇಖರ್, ವಿಕ್ರಮ್ ಇದ್ದರು.
ಇದನ್ನೂ ಓದಿ ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ
