ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಇವತ್ತು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರವಾಸ ಪಟ್ಟಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ರಾಮೇನಕೊಪ್ಪದಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಯೋಜನೆ ಅಡಿ ಅಭಿವೃದ್ಧಿಪಡಿಸಿರುವ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸೊರಬ ತಾಲೂಕು ಚಂದ್ರಗುತ್ತಿಯಲ್ಲಿ ಹೊರ ಪೊಲೀಸ್ ಠಾಣೆ ಕಟ್ಟಡ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಸೊರಬದ ರಂಗಮಂದಿರದಲ್ಲಿ ಹಕ್ಕಪತ್ರ ವಿತರಣೆ, ಅಂಗನವಾಡಿಗಳಿಗೆ ಟಿವಿ, ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.45ಕ್ಕೆ ರಂಗಮಂದಿರದಲ್ಲಿ ಕಂದಾಯೋತ್ಸವದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸೊರಬದ ಕುಪ್ಪುಗುಡ್ಡೆಯಲ್ಲಿ ಅಂಬೇಡ್ಕರ್ ವಸತಿ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






