ತೀರ್ಥಹಳ್ಳಿ/ ಹೊಸನಗರ: 2025– 26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯಲು ಇಚ್ಛಿಸುವ ರೈತರಿಗೆ ಸಹಾಯಧನ (Subsidy) ನೀಡಲು ಅವಕಾಶವಿದೆ. ರೈತರು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 42 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಉಚಿತವಾಗಿ ತಾಳೆ ಸಸಿ ವಿತರಿಸಿ, ನೆಟ್ಟ ಸಸಿಗಳ ನಿರ್ವಹಣೆಗೆ 3 ವರ್ಷಗಳವರೆಗೆ ಅವಕಾಶವಿರುತ್ತದೆ. ಹೊಸದಾಗಿ ತಾಳೆ ಬೆಳೆ ಅಭಿವೃದ್ಧಿ ಪಡಿಸಲು ಇಚ್ಛಿಸುವ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?


