ಕುವೆಂಪು ವಿವಿ ಘಟಿಕೋತ್ಸವ, ಅಭ್ಯರ್ಥಿಗಳಿಂದ ಪದವಿ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವ (Convocation) ಜೂನ್ ತಿಂಗಳಲ್ಲಿ ಜರುಗಲಿದೆ. ಈ ವೇಳೆ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು.

ಆಗಸ್ಟ್/ಸೆಪ್ಟೆಂಬರ್-2024 ರ ಸ್ನಾತಕ, ಅಕ್ಟೋಬರ್/ನವೆಂಬರ್-2024 ರ ಬಿ.ಪಿ ಇಡಿ, ಸ್ನಾತಕೋತ್ತರ, ಪಿಜಿ ಡಿಪ್ಲೊಮಾ, ಜನವರಿ/ಫೆಬ್ರುವರಿ-2025ರ ಬಿ.ಇಡಿ ಹಾಗೂ 2025 ಜನವರಿ 31 ಮತ್ತು ನಂತರದಲ್ಲಿ ಪಿಎಚ್.ಡಿ ಪದವಿಗೆ ಪ್ರಕಟಣೆ ಹೊರಡಿಸಲಾದ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.

SLV-BOOK-SHOP-SHIMOGA

ಘಟಿಕೋತ್ಸವದಲ್ಲಿ ರ‍್ಯಾಂಕ್/ ಸ್ವರ್ಣ ಪದಕ/ನಗದು ಬಹುಮಾನ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಿದ್ದು, ಮೇಲ್ಕಂಡ ವರ್ಷದಲ್ಲಿ ಪ್ರವೇಶ ಶುಲ್ಕದ ಜೊತೆಗೆ ಘಟಿಕೋತ್ಸವ ಶುಲ್ಕ ಪಾವತಿಸಿರುವ ದೂರ ಶಿಕ್ಷಣದ ವಿದ್ಯಾರ್ಥಿಗಳು ಹಾಗೂ ರೆಗ್ಯೂಲರ್ ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

JNNCE-ADMISSION-2025-26

ಹಿಂದಿನ ವರ್ಷಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪದವಿ ಪ್ರಮಾಣ ಪತ್ರ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ವಿಶ್ವವಿದ್ಯಾಲಯದ ವೆಬ್‌ಸೈಟ್ ವಿಳಾಸ www.kuvempu.ac.in  ನಲ್ಲಿ ವಿದ್ಯಾರ್ಥಿಗಳು ಎಕ್ಸಾಮಿನೇಷನ್‌ಗೆ ಲಾಗಿನ್ ಆಗಿ ಕಾನ್ವೊಕೇಷನ್ ಅಪ್ಲಿಕೇಷನ್ ಎಂಬ ಲಿಂಕ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಇ–ಅರ್ಜಿಯನ್ನು ಅಪ್‌ಲೋಡ್ ಮಾಡುವ ಕುರಿತ ಸೂಚನೆಗಳನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.

ಪಿಎಚ್.ಡಿ, ಪದವೀಧರರು ವಿಶ್ವವಿದ್ಯಾಲಯದ ವೆಬ್‌ಸೈಟ್ www.kuvempu.ac.in ಮೂಲಕ ತಮಗೆ ನೀಡಲಾದ ನೋಂದಣಿ ಸಂಖ್ಯೆ ಬಳಸಿಕೊಂಡು ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್‌ 2 ಕೊನೆಯ ದಿನ.

ಇದನ್ನೂ ಓದಿ »  ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್, ಮೌಲ್ಯಮಾಪನ ಕಾರ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾದ್ರಿ, ಶಂಕರಘಟ್ಟ-577451, ಇ-ಮೇಲ್:kusconvo@gmail.com ಹಾಗೂ ಮೊಬೈಲ್‌ ಸಂಖ್ಯೆ -8183098138 ಗೆ ಸಂಪರ್ಕಿಸಬಹುದು ಎಂದು ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 19, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment