ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ATM ಮೆಷಿನ್‌ನಲ್ಲಿ ಡ್ರಾ ಮಾಡಿದ ಹಣ ಬಾರದೆ ಇರುವ ಕುರಿತು ಮೂರು ಪ್ರತ್ಯೇಕ ದೂರು ಬಂದ ಹಿನ್ನೆಲೆ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಗಮ್‌ ಟೇಪ್‌ ಮಾದರಿ ವಸ್ತು ಅಂಟಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ವಂಚಕನ ವಿರುದ್ಧ ಕೆನರಾ ಬ್ಯಾಂಕ್‌ ಸಿಬ್ಬಂದಿ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ.

ಮೇ 13ರಂದು ಮೂರು ಪ್ರತ್ಯೇಕ ಗ್ರಾಹಕರು ಪ್ರತ್ಯೇಕ ಸಮಯದಲ್ಲಿ ಎಟಿಎಂನಿಂದ ಹಣ ಬಿಡಿಸಿಕೊಳ್ಳಲು ಬಂದಿದ್ದರು. ಎಟಿಎಂನಿಂದ ಹಣ ಬಾರದಿದ್ದರು ಅಕೌಂಟ್‌ನಲ್ಲಿ ಹಣ ಕಡಿತವಾಗಿತ್ತು. ಈ ಸಂಬಂಧ ಕೆನರಾ ಬ್ಯಾಂಕ್‌ಗೆ ಮೂರು ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿನ್ನೆಲೆ ಎಟಿಎಂ ಕೇಂದ್ರದಲ್ಲಿ ಸಿಸಿಟಿವಿ ಪರಿಶೀಲಿಸಿದಾಗ ವಂಚಕನ ಕೃತ್ಯ ಬೆಳಕಿಗೆ ಬಂದಿದೆ.

SLV-BOOK-SHOP-SHIMOGA

ಸಿಸಿಟಿವಿಯಲ್ಲಿ ಏನಿತ್ತು?

ಮೇ 13ರ ರಾತ್ರಿ ವಿನೋಬನಗರದ 100 ಅಡಿ ರಸ್ತೆಯ ಕೆನರಾ ಬ್ಯಾಂಕ್‌ ಎಟಿಎಂನೊಳಗೆ ಬಂದ ಅಪರಿಚಿತನೊಬ್ಬ ಹಣ ಹೊರ ಬರುವ ಜಾಗದಲ್ಲಿ ಗಮ್‌ ಟೇಪ್‌ ಮಾದರಿ ವಸ್ತು ಅಂಟಿಸಿ ಹೋಗಿದ್ದ. ನಂತರ ಬಂದ ಗ್ರಾಹಕರೊಬ್ಬರು ಎಟಿಎಂನಿಂದ 6 ಸಾವಿರ ರೂ. ಹಣ ಬಿಡಿಸಿಕೊಳ್ಳಲು ಯತ್ನಿಸಿದ್ದು, ಹಣ ಎಟಿಎಂನಿಂದ ಹೊರಬಂದಿರಲಿಲ್ಲ. ಹಾಗಾಗಿ ಗ್ರಾಹಕ ಬರಿಗೈಲಿ ಹಿಂತಿರುಗಿದ್ದರು. ಕೂಡಲೆ ಒಳ ಬಂದ ಅಪರಿಚಿತ ಗಮ್‌ ಟೇಪ್‌ ತೆಗೆದು, ಹಣ ತೆಗೆದುಕೊಂಡು ಹೋಗಿದ್ದ. ಇದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. 

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಸ್ವಲ್ಪ ಹೊತ್ತಿಗೆ ಮತ್ತಿಬ್ಬರು ಗ್ರಾಹಕರು ಬಂದಿದ್ದು ಅವರಿಗು ಕೂಡ ಹಣ ಬಂದಿರಲಿಲ್ಲ. ಅವರು ಎಟಿಎಂನಿಂದ ಹೊರ ಹೋಗುತ್ತಿದ್ದಂತೆ ಅಪರಿಚಿತ ವ್ಯಕ್ತಿ ಒಳಗೆ ಬಂದು, ಗಮ್‌ ಟೇಪ್‌ ತೆಗೆದು ಹಣ ತೆಗೆದುಕೊಂಡು ಹೋಗಿದ್ದ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಟ್ಟು 16,500 ರೂ. ವಂಚನೆಯಾಗಿದೆ ಎಂದು ಆರೋಪಿಸಲಾಗಿದೆ.

JNNCE-ADMISSION-2025-26

ಜೆಎನ್‌ಎನ್‌ ಕಾಲೇಜು ಬಳಿ ಕೃತ್ಯ

ಇನ್ನೊಂದೆಡೆ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜು ಬಳಿ ಎಟಿಎಂ ಕೇಂದ್ರದಲ್ಲಿಯು ಇದೇ ರೀತಿ ಕೃತ್ಯ ನಡೆದಿದೆ. ಹಣ ಡ್ರಾ ಆಗುವ ಸ್ಥಳದಲ್ಲಿ ಅಪರಿಚಿತನೊಬ್ಬ ಗಮ್‌ ಟೇಪ್‌ ಅಂಟಿಸಿದ್ದ. ಬಳಿಕ ಅದನ್ನು ಬ್ಲೇಡ್‌ನಿಂದ ಕಟ್‌ ಮಾಡಿ ತೆಗೆದಿದ್ದಾನೆ. ಹಾಗಾಗಿ ಎಟಿಎಂ ಮೆಷಿನ್‌ಗೆ ತರಚಿದಂತಾಗಿದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್‌ ಸಿಬ್ಬಂದಿ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 20, 2025

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment