ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದೆ. ಇವತ್ತು ಗುಡುಗು, ಮಿಂಚು, ಜೋರು ಮೇಲ್ಮೈ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇದೇ ಕಾರಣಕ್ಕೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. (Weather Report)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ತುಸು ಇಳಿಕೆ ಆಗಿದೆ. ತಂಪು ವಾತಾವರಣ ಇದೆ. ಆಗುಂಬೆಯಲ್ಲಿ ಇವತ್ತು ಗರಿಷ್ಠ 26 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ.
ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಮುಂದಿನ ಏಳು ದಿನ ಶಿವಮೊಗ್ಗ ಜಿಲ್ಲೆಗೆ ಸಾಲು ಸಾಲು ಎಚ್ಚರಿಕೆ, ಯಾವ್ಯಾವ ದಿನ ಎಷ್ಟಿರುತ್ತೆ ಮಳೆ?
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






