ಫೈನಾನ್ಸ್‌ ಸಿಬ್ಬಂದಿ ಕಿರುಕುಳದ ಆರೋಪ, ಶಿವಮೊಗ್ಗದಲ್ಲಿ ವಿಷ ಸೇವಿಸಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ: ಫೈನಾನ್ಸ್‌ ಸಂಸ್ಥೆಯ ಕಿರುಕುಳಕ್ಕೆ ಮನನೊಂದು ವಿಷ ಸೇವಿಸಿದ್ದ ಆಟೋ ಚಾಲಕ (Driver) ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಜ್ಯೋತಿ ನಗರ ನಿವಾಸಿ ರಂಜಿತ್‌ (39) ಮೃತರು.

ಪೇಂಟಿಂಗ್‌ ಕೆಲಸ ಮಾಡುತ್ತಿದ್ದ ರಂಜಿತ್‌ಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಆಟೋ ಚಲಾಯಿಸುತ್ತಿದ್ದರು. ಫೈನಾನ್ಸ್‌ ಸಂಸ್ಥೆಯೊಂದರಿಂದ 3 ಲಕ್ಷ ರೂ. ಸಾಲ ಪಡೆದಿದ್ದರು. ಸಾಲದ ವಿಚಾರವಾಗಿ ಫೈನಾನ್ಸ್‌ ಸಂಸ್ಥೆಯವರು ಮನೆ ಬಳಿ ಬಂದು ಅವಾಚ್ಯವಾಗಿ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.

JNNCE-ADMISSION-2025-26

ಮನನೊಂದ ರಂಜಿತ್‌ ಮೇ 20ರಂದು ಸಂಜೆ ವಿಷ ಸೇವಿಸಿದ್ದರು. ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ರಂಜಿತ್‌ ಅವರ ಪತ್ನಿ ದೂರನಲ್ಲಿ ತಿಳಿಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್‌ ಮೊಬೈಲ್‌ ಸ್ವಿಚ್‌ ಆಫ್‌

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment