ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ: ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಟ (Actor) ಮಡೆನೂರು ಮನು ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಗೆ ಬೆಂಗಳೂರು ಪೊಲೀಸರು ಇವತ್ತು ಶಿಕಾರಿಪುರಕ್ಕೆ ಆಗಮಿಸಿದ್ದರು. ಸಂತ್ರಸ್ತೆಯನ್ನು ಕರೆತಂದಿದ್ದ ಪೊಲೀಸರು ಇಲ್ಲಿನ ಲಾಡ್ಜ್ ಒಂದರಲ್ಲಿ ಮಹಜರ್ ಪ್ರಕ್ರಿಯೆ ನಡೆಸಿದರು.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಸಂತ್ರಸ್ತೆಯನ್ನು ಶಿಕಾರಿಪುರ ಪಟ್ಟಣದ ಲಾಡ್ಜ್‌ಗೆ ಕರೆತಂದಿದ್ದರು. ಅವರು ತಂಗಿದ್ದ ಕೊಠಡಿಗಳು, ಘಟನೆ ನಡೆದಿದೆ ಎಂದು ಆರೋಪಿಸಲಾಗಿರುವ ಕೊಠಡಿಗಳಲ್ಲಿ ಮಹಜರ್ ನಡೆಸಿದರು.

2022ರಲ್ಲಿ ಶಿಕಾರಿಪುರದಲ್ಲಿ ಕಾರ್ಯಕ್ರಮ ಒಂದಕ್ಕೆ ಮಡೆನೂರು ಮನು, ಸಂತ್ರಸ್ತೆ ಸೇರಿ ಹಲವರು ಆಗಮಿಸಿದ್ದರು. ಈ ಸಂದರ್ಭ ಘಟನೆ ನಡೆದಿತ್ತು ಎಂದು ಸಂತ್ರಸ್ತೆ ಆರೋಪಿಸಿದ್ದರು. ಇದೇ ಕಾರಣಕ್ಕೆ ಇವತ್ತು ಮಹಜರ್ ಪ್ರಕ್ರಿಯೆ ನಡೆಯಿತು. ಲಾಡ್ಜ್ ಮಾಲೀಕರು, ಕಾರ್ಯಕ್ರಮ ಆಯೋಜಕರಿಂದಲು ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹಣ್ಣು ಮೇಳ, ಅಪರೂಪದ ಮಾವು, ಹಲಸು ಮಾರಾಟ, ಯಾವೆಲ್ಲ ವೆರೈಟಿಯ ಹಣ್ಣುಗಳಿವೆ?

LATEST NEWS
- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು















