ಶಿಕಾರಿಪುರ: ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು (Thief) ಬಂಧಿಸಿರುವ ಶಿಕಾರಿಪುರ ಠಾಣೆ ಪೊಲೀಸರು ಆತನಿಂದ 14.70 ಲಕ್ಷ ರೂ. ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ. ಶಿಕಾರಿಪುರದ ಮಹಿಳೆಯೊಬ್ಬರು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಜ. 24ರಂದು ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.

ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್ಐ ಪಿ.ಎಸ್. ಶರತ್ ಅವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ » ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?



ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
