ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಖಾಸಗಿ ಬಸ್ (Bus) ಮತ್ತು ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದ ಬೆಂಗಳೂರು ಮೂಲದ ಪ್ರದೀಪ್ ಎಂಬುವವರು ಸಾವನ್ನಪ್ಪಿದ್ದಾರೆ.
ಹೇಗಾಯ್ತು ಘಟನೆ?

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಖಾಸಗಿ ಬಸ್ ರಾಯಲ್ ಆರ್ಕಿಡ್ ಹೊಟೇಲ್ ಎದುರು ಬಿ.ಹೆಚ್.ರಸ್ತೆಯಿಂದ ಎಲ್‌ಎಲ್‌ಆರ್ ರಸ್ತೆಯಲ್ಲಿ ತೆರಳುತ್ತಿತ್ತು. ಈ ಸಂದರ್ಭ ಗೋಪಿ ಸರ್ಕಲ್ ಕಡೆಯಿಂದ ಸವರ್‌ಲೈನ್ ರಸ್ತೆಯಲ್ಲಿ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಬಳಿಕ ಬಸ್ಸು ಪಕ್ಕದ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರು ಕೂಡ ಜಖಂ ಆಗಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



ಇದನ್ನೂ ಓದಿ » ಲೋಕಾಯುಕ್ತರ ದಿಢೀರ್ ಭೇಟಿ, ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕಡತಗಳ ಪರಿಶೀಲನೆ

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು















