ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ (DCC BANK) ನಡೆದಿರುವ ನಕಲಿ ಚಿನ್ನಾಭರಣ ಅಡಮಾನ (Gold Loan) ಪ್ರಕರಣ ಸಂಬಂಧ ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದೆ. ಹಣ ಅಕ್ರಮ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿರುವುದಾಗಿ ಇ.ಡಿ ತಿಳಿಸಿದೆ.
ಜೂನ್ 6ರಂದು ವಿಶೇಷ ನ್ಯಾಯಾಲಯದ ಮುಂದೆ ಪ್ರತ್ಯೇಕ ಪ್ರಕರಣ ದಾಖಲು ಮಾಡಿರುವುದಾಗಿ ಇ.ಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಈವರೆಗೂ ಶಿವಮೊಗ್ಗ ಪೊಲೀಸರು ಮತ್ತು ಲೋಕಾಯುಕ್ತದಲ್ಲಿ ದಾಖಲಾಗಿದ್ದ ಪ್ರಕರಣಗಳ ಆಧಾರದಲ್ಲಿ ತನಿಖೆ ನಡೆಸಲಾಗುತಿತ್ತು. ಈಗ ಇ.ಡಿ. ಪ್ರತ್ಯೇಕ ಪ್ರಕರಣ ದಾಖಲಿಸಿರುವುದು ಆರ್.ಎಂ.ಮಂಜುನಾಥ ಗೌಡ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.
₹62.77 ಕೋಟಿಯ ನಕಲಿ ಚಿನ್ನಾಭರಣ ಅಡಮಾನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಏಪ್ರಿಲ್ 9ರಂದು ಮಂಜುನಾಥ ಗೌಡ ಅವರನ್ನು ಬಂಧಿಸಿತ್ತು. ಈಚೆಗೆ ಮಂಜುನಾಥ ಗೌಡ ಮತ್ತು ಅವರ ಪತ್ನಿಗೆ ಸೇರಿದ 13.91 ಕೋಟಿ ರೂ. ವೆಚ್ಚದ ಸ್ಥಿರ ಮತ್ತು ಚರ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು.
ಇದನ್ನೂ ಓದಿ » ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟಿ ಕೋಟಿ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ


