ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ (AGUMBE GHAT) ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತವಾಗುವ ಸಂಭವದೆ. ಈ ಹಿನ್ನೆಲೆ ಜೂನ್ 15ರಿಂದ ಸೆ.30ರವರೆಗೆ ಭಾರಿ ವಾಹನ ಸಂಚಾರ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ- ಕುಂದಾಪುರ- ಸಿದ್ದಾಪುರ- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು


