ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ ಸಬೀತಾದ ಹಿನ್ನೆಲೆ ಓರ್ವ ಮಹಿಳೆ ಸೇರಿ ಇಬ್ಬರಿಗೆ ಜೈಲು (Imprisonment) ಶಿಕ್ಷೆ ಮತ್ತು ದಂಡ ವಿಧಿಸಿ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಶಿಕಾರಿಪುರದ ಯಾಸೀರ್ ಪಾಷಾ (27) ಎಂಬಾತನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹50 ಸಾವಿರ ದಂಡ ವಿಧಿಸಲಾಗಿದೆ. ಶಹಜಾನ್ ಅಲಿಯಾಸ್ ಸಾನಿಯಾ ಬೇಗಂಗೆ (52) ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹25 ಸಾವಿರ ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಶಿಕಾರಿಪುರದ ಕುಂಬಾರ ಗುಂಡಿ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಗುರುರಾಜ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ಈ ಸಂಬಂಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪಿಎಸ್‌ಐ ಪ್ರಶಾಂತ್ ಕುಮಾರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾ.ಮಂಜುನಾಥ ನಾಯಕ್ ಅವರು ಇಬ್ಬರಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸುರೇಶ್ ಕುಮಾರ್ ವಾದಿಸಿದ್ದರು.
ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

