ಸಾಗರ: ಜಲನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ (Dam) ಒಳ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಇವತ್ತು 39,961 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆಯಾಗಿತ್ತು. ಪ್ರಸ್ತುತ 1766.40 ಅಡಿಯಷ್ಟು ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದ ಹೊರ ಹರಿವು 3012 ಕ್ಯೂಸೆಕ್ ಇದೆ.
ಲಿಂಗನಮಕ್ಕಿ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಸದ್ಯ 35.01 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಶೇ.23ರಷ್ಟು ಮಾತ್ರ ಜಲಾಯಶ ಭರ್ತಿಯಾಗಿದೆ.
ಇದನ್ನೂ ಓದಿ » ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ


