ಶಿವಮೊಗ್ಗ ಸಿಟಿಯ ವಿವಿಧೆಡೆ ಜೂನ್‌ 17, 18ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಉಪವಿಭಾಗ -2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂನ್ 17 ಮತ್ತು 18ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut) 
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಜೂನ್ 17 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯ ನಗರ, ಕೆಎಚ್‌ಬಿ ಕಾಲೊನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತವಾಗಲಿದೆ.

https://chat.whatsapp.com/JPJ0lTQsTKf365Fqu6Q7cd

ಜೂನ್ 18 ರಂದು ಬೆಳಿಗ್ಗೆ 10ರಿಂದ ಸಂಜೆ 6 ರವರೆಗೆ ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಸ್‌ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, 24 ಗಂಟೆಯಲ್ಲಿ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment