ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು ಜೋರು ಮಳೆ, ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report)
ಸೋಮವಾರ ಇಡೀ ದಿನ ಜಿಲ್ಲೆಯಲ್ಲಿ ಮಳೆಯಾಗಿತ್ತು. ಇದರಿಂದ ತಾಪಮಾನ ಇಳಿಕೆಯಾಗಿದ್ದು, ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಲೋಕಾಯುಕ್ತ ದಾಳಿ, ₹30 ಸಾವಿರ ಲಂಚದೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸೆಕ್ಷನ್ ಆಫೀಸರ್



