ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಹೊಳೆಹೊನ್ನೂರು: ಪಟ್ಟಣದ ಭದ್ರಾ ಸೇತುವೆ ಬಳಿ ಇತ್ತೀಚೆಗೆ ನಿರ್ಮಿಸಿರುವ ಬೈಪಾಸ್ ರಸ್ತೆಯಲ್ಲಿ ಬಿರುಕು (Crack) ಕಾಣಿಸಿಕೊಂಡಿದೆ. ಇದನ್ನು ವಿರೋಧಿಸಿ ನಾಗರಿಕರು ಪ್ರತಿಭಟನೆ ನಡೆಸಿದರು.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಒಂದು ತಿಂಗಳ ಹಿಂದೆ ಸಂಸದ ಬಿ.ವೈ.ರಾಘವೇಂದ್ರ ಹೆದ್ದಾರಿಯ ಲೋಕಾರ್ಪಣೆ ಮಾಡಿದ್ದರು. ಆದರೆ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ರಸ್ತೆ ಅಭಿವೃದ್ಧಿಪಡಿಸುವಲ್ಲಿ ಗುತ್ತಿಗೆದಾರರು ಆತುರ ತೋರಿದ್ದರಿಂದ ಅದು ಕುಸಿಯುವ ಹಂತದಲ್ಲಿದೆ. ಕಾಮಗಾರಿ ನಡೆಯುತ್ತಿರುವಾಗಲೇ ಎರಡು ಮೂರು ಬಾರಿ ರಸ್ತೆ ಕುಸಿತವಾಗಿತ್ತು. ಇದರಿಂದ ಎಚ್ಚೆತ್ತುಕೊಳ್ಳದೇ, ಕಾಮಗಾರಿ ಪೂರ್ಣಗೊಳಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಸ್ತೆ ಕುಸಿಯುವ ಆತಂಕ ಸೃಷ್ಟಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Holehonnuru-residents-protest-against-road-crack

ರಸ್ತೆಗೆ ಪೂರ್ತಿ ಪ್ರಮಾಣದಲ್ಲಿ ತಡೆಗೋಡೆ ನಿರ್ಮಿಸಿದ್ದರೆ ರಸ್ತೆ ಕುಸಿಯುತ್ತಿರಲಿಲ್ಲ. ಕಾಮಗಾರಿಯೂ ಅವೈಜ್ಞಾನಿಕವಾಗಿದ್ದು, ಇದರಿಂದ ವಾಹನ ಸವಾರರಿಗೆ ಅಪಾಯ ತಪ್ಪಿದ್ದಲ್ಲ’ ಎಂದು ದೂರಿದರು.

ಪ್ರತಿಭಟನೆಯಲ್ಲಿ ನಾಗೇಶ, ಕೇಶವ, ನಾಗರಾಜ್, ನವೀನ, ವೆಂಕಟೇಶ್‌ ಸೇರಿದಂತೆ ಹಲವರು ಇದ್ದರು. 

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment