ಶಿವಮೊಗ್ಗ: ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2025 ನೇ ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ (Awards) ಅರ್ಜಿ ಆಹ್ವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
2025 ರ ಜುಲೈ 31 ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ, ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ, ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳ ಕ್ಷೇತ್ರಗಳ ಸಾಧಕ ಮಕ್ಕಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. https://awards.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಅಥವಾ ದೂ.ಸಂ: 08182-295709 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ಮಂಜುನಾಥ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ, ನಾಲ್ಕು ಡ್ರಂಕ್ ಅಂಡ್ ಡ್ರೈವ್ ಕೇಸ್ ಪತ್ತೆ


